6:31 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ನವೆಂಬರ್ 23: ತೇಜಸ್ವಿ ಪ್ರತಿಷ್ಠಾನದಲ್ಲಿ ‘ಕನ್ನಡ ಭಾಷಾಭಿವೃದ್ದಿಗೆ ತಂತ್ರಜ್ಞಾನದ ಪಾತ್ರ’ ವಿಚಾರಗೋಷ್ಠಿ

15/11/2022, 20:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದ್ದು ರಂಗಕರ್ಮಿಗಳು ಹಾಗೂ ರಂಗ ನಿರ್ದೇಶಕರಾದ ಪ್ರಸಾದ್ ರಕ್ಷಿದಿ ಅವರು ಕನ್ನಡ ಭಾಷಾಭಿವೃದ್ದಿಗೆ ತಂತ್ರಜ್ಞಾನದ ಪಾತ್ರ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ವೇಣುಗೋಪಾಲ್ ಅವರು ಕನ್ನಡ ಭಾಷಾಭಿವೃದ್ದಿಯ ಕುರಿತ ತೇಜಸ್ವಿ ಅವರ ಚಿಂತನೆಗಳು ವಿಷಯದ ಬಗ್ಗೆ ಮಾತನಾಡಲಿದ್ದಾರೆ. ನಂತರ ಕನ್ನಡ ಕಟ್ಟುವ ಬಗೆ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ವಿಚಾರಗೋಷ್ಠಿ ಆರಂಭವಾಗಲಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸುವವರು 8971964913,9663098873 ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು