4:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ

17/02/2025, 11:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು