2:40 PM Tuesday7 - April 2026
ಬ್ರೇಕಿಂಗ್ ನ್ಯೂಸ್
ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ

07/04/2026, 14:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲೊಂದು ದುರ್ಘಟನೆ ಸಂಭವಿಸಿದೆ. ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಇವರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿರುವ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮಾಹಿತಿಯ ಪ್ರಕಾರ, ರನ್ಯಾ ಅವರು ನಿನ್ನೆ ಸಂಜೆ ತಮ್ಮ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಬಳಿಕ ಮತ್ತೆ ಹೊರಗೆ ತೆರಳಿ ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿದರೆಂದು ತಿಳಿದು ಬಂದಿದೆ.


ಘಟನೆಯ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸ್ಥಳೀಯರಲ್ಲಿ ಈ ಘಟನೆ ದುಃಖ ಮತ್ತು ಆತಂಕ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು