12:51 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪುತ್ತೂರು ವೈಷ್ಣವೀ ನಾಟ್ಯಾಲಯದ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ

20/09/2026, 11:39

ವಿಟ್ಲ(reporterkarnataka.com): ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹ ಮಾಸದ ವಿಶೇಷ ಪೂಜೆಯ ಸಂದರ್ಭದಲ್ಲಿ ಪುತ್ತೂರು ವೈಷ್ಣವೀ ನಾಟ್ಯಾಲಯದ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ವೈಷ್ಣವೀ ರಜತ ನೃತ್ಯಾಂತರ್ಯಾನದ ಗೌರವಾಧ್ಯಕ್ಷರಾದ ಶ್ರೀಕೇಶವ ಪ್ರಸಾದ್ ಮುಳಿಯರವರು ಉದ್ಘಾಟಿಸಿದರು. ಭಗವತೀ ದೇವಸ್ಥಾನದ ವ್ಯವಸ್ಥಾಪಕರಾಗಿರುವ ಶ್ರೀ ಕೇಶವ ಆರ್.ವಿ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಸುಭಾಷ್ ಚಂದ್ರ ನಾಯಕ್ ಉದ್ಯಮಿಗಳು ಹಾಗೂ ಸಂಗೀತ ಗುರುಗಳು ವಿದುಷಿ ಪಾರ್ವತಿ ಗಣೇಶ್ ಭಟ್ ಹೊಸಮೂಲೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಾಟ್ಯಾಲಯದ ನಿರ್ದೇಶಕಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಅವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.
ನಾಟ್ಯಾಲಯದ ವತಿಯಿಂದ ಕೇಶವ್ ಆರ್.ವಿ. ಪಾರ್ವತಿ ಗಣೇಶ್ ಭಟ್, ಹಾಗೂ ಶ್ರೀಮತಿ ಲಲಿತಾರವರನ್ನು ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಜರಗಿತು.


ಹಿಮ್ಮೇಳದಲ್ಲಿ ನಟುವಾಂಗದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ‘ಹಾಡುಗಾರಿಕೆಯಲ್ಲಿ ವಿದ್ವಾನ್ ಶ್ರೀ ವಿಷ್ಣು ಭಟ್ ವೆಳಿಕ್ಕೋತ್ ಮತ್ತು ವಸಂತ ಕುಮಾರ ಗೋಸಾಡ, ಮೃದಂಗದಲ್ಲಿ ಶ್ರೀ ರಾಜೀವ ಗೋಪಾಲ ವೆಳ್ಳಿಕ್ಕೋತ್ ‘ಕೊಳಲಿನಲ್ಲಿ ಶ್ರೀ ರಾಜಗೋಪಾಲ ಕಾಞಂಗಾಡ್ ಮತ್ತು ರಿದಂ ನಲ್ಲಿ ಶಶಾಂಕ ಬಿ.ಸಿ.ರೋಡು ಸಹಕರಿಸಿದರು.
ಶ್ರೀಮತಿ ತುಳಸಿ ವಿಟ್ಲ ರವರು ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಚಂಪಾ ವಿಟ್ಲರವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು