10:12 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ: ಆನ್ಲೈನಲ್ಲಿ ವಂಚನೆ ಕುರಿತು ಸಿಐಡಿ ಡಿಎಸ್ಪಿ ಮಾಹಿತಿ

16/01/2022, 22:18

ಮಂಗಳೂರು:ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ ಭಾನುವಾರ ಆನ್ಲೈನಲ್ಲಿ  ಜರುಗಿತು.


ಬೆಂಗಳೂರು ಸೈಬರ್ ಕ್ರೈಂ ವಿಭಾಗದ(ಸಿಐಡಿ )ಡಿವೈಎಸ್ಪಿ ಕೆ. ಎನ್. ಯಶವಂತ ಕುಮಾರ್ ಅವರು ಮಾತನಾಡಿ, ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದ್ದು, ಅದರಿಂದ  ಸುರಕ್ಷಿತವಾಗಿರಲು ಸಲಹೆಗಳನ್ನು ಪಾಲಿಸಿ ಎಂದರು.


ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಗಳಲ್ಲಿ ಉದ್ಯೋಗ, ಲೋನ್ ನೀಡುವ ವಂಚನೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಿಮ್ ಕಾರ್ಡ್ ಕಂಪೆನಿಗಳ  ಮೆಸೇಜನ್ನು ನಂಬಿ ಬ್ಯಾಂಕ್ ಖಾತೆ, ಎಟಿಎಂ ಗಳ ಮಾಹಿತಿಯನ್ನು ನೀಡಿ ವಂಚನೆಗೆ ಗೊಳಗಾಗುತ್ತಿದ್ದಾರೆ. ಇದರ ಬಗ್ಗೆ ಜನರು ಹೆಚ್ಚಿನ ಜಾಗೃತಿಯನ್ನು ವಹಿಸಿಕೊಳ್ಳಬೇಕು ಹಾಗೂ ಯಾವ ರೀತಿ  ವಂಚನೆ ಕೋರರು ಆನ್ಲೈನ್ ಮೂಲಕ ವಂಚನೆ ಮಾಡುತ್ತಾರೆ ಎಂದು  ಪ್ರಾತ್ಯಕ್ಷಿಕೆ ಮೂಲಕ, ವಿವರವಾಗಿ ಮಾಹಿತಿಯನ್ನು ನೀಡಿದರು. ಯುವಜನತೆಗೆ ಜಾಗೃತರಾಗಿರುವಂತೆ ಕರೆ ನೀಡಿದರು.

ರಾಜ್ಯ ಎನ್ಎಸ್ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ  ಮಾತನಾಡಿ, ರಾಜ್ಯದಾದ್ಯಂತ  ವಂಚನೆ ಪ್ರಕರಣಗಳು ಕಂಡು ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ಮೇಲ್ ಹಗರಣ ಹೆಚ್ಚಾಗಿದೆ. ಯುವ ಸಮುದಾಯ ಇಂತಹ ದುಷ್ಕೃತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳು ಶೋಷಣೆಗೊಳಗಾಗುತ್ತಿದ್ದಾರೆ.  ಇದರಿಂದ ಮುಕ್ತರಾಗಬೇಕು ಎಂಬ ನಿಟ್ಟಿನಲ್ಲಿ ಸೈಬರ್ ಕ್ರೈಮ್ ಜಾಗೃತಿ ಅಭಿಯಾನವನ್ನು ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಮುಂದಿನ ದಿನಗಳಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಮತ್ತು ಪ್ಲಾನಿಂಗ್ ವಿಭಾಗದ  ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, ಮುಖ್ಯ ಮಂತ್ರಿ ಬೊಮ್ಮಾಯಿಯವರು ಈಗಾಗಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು. ಸೈಬರ್ ಸೇಫ್ ಕ್ಯಾಂಪಸ್ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ ಎಂದರು.

ಡಾಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಸೀನಿಯರ್ ಕನ್ಸಲ್ಟೆಂಟ್
ಶಶಿಧರ್ ಟಿ.ಕೆ ಹಾಗೂ ಸೀನಿಯರ್ ಅನಲಿಸ್ಟ್    ಮಂಜೇಶ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಮಾತನಾಡಿ ಇಂತಹ ಸಾಮಾಜಿಕ ಕಾರ್ಯಕ್ರಮಗಳು ಅತ್ಯವಶ್ಯಕ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರರು.

ಈ  ಕಾರ್ಯಾಗಾರದಲ್ಲಿ ರಾಜ್ಯದ ಎಲ್ಲಾ ವಿ.ವಿ ಗಳ ಸಂಯೋಜನಾಧಿಕಾರಿಗಳು,ಯೋಜನಾಧಿಕಾರಿಗಳು ಹಾಗೂ ಸ್ವಯಂ ಸೇವಕ, ಸೇವಕಿಯರು, ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು