6:05 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ರಾಷ್ಟ್ರೀಯ ಭಾವೈಕ್ಯತೆ ಸಾಧ್ಯ: ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್

10/08/2023, 20:26

ಮಂಗಳೂರು(reporterkarnataka.com):ನಗರದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು.

ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯು ಪ್ರೇರಣೆ ನೀಡಲಿದೆ ಎಂದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಜೀವನವನ್ನು ರೂಪಿಸಬೇಕೆಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಪಪೂ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್‌ ಅವರು ಎನ್.ಎಸ್.ಎಸ್ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಮಾಜ ಸೇವಾ ಮನೋಭಾವನೆ ಹೆಚ್ಚಿಸುವಲ್ಲಿ ರಾ. ಸೇ. ಯೋಜನೆ ಪೂರಕವಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿ, ಸಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಿಲಾಗ್ರಿಸ್ ವಿದ್ಯಾಸಂಸ್ಥೆಯ ರಾ. ಸೇ. ಸೇವಾ ಯೋಜನೆ ಘಟಕವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬೇಕೆಂದರು.
ರಾ.ಸೇ.ಯೋಜನಾಧಿಕಾರಿ ಕಿರಣ್ ಡಿಸೋಜ, ರಾ. ಸೇ. ಯೋಜನೆಯ ವಿದ್ಯಾರ್ಥಿ ನಾಯಕ ಅಹ್ಮದ್ ಶಾಕಿಬ್ ಖಾನ್, ಉಪನಾಯಕ ಶಮನ್ ಮತ್ತು ಕರ‍್ಯದರ್ಶಿ ಝುಲ್ಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಕಿರಣ್ ಡಿಸೋಜ ಸ್ವಾಗತಿಸಿದರು. ಅಹ್ಮದ್ ಶಾಕಿಬ್ ಖಾನ್ ವಂದಿಸಿ, ಮುಷ್ಫಿಕ್ ಅಹ್ಮದ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು