1:36 AM Monday13 - January 2025
ಬ್ರೇಕಿಂಗ್ ನ್ಯೂಸ್
ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ… ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

NSUI | ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ನೇಮಕ

04/01/2024, 22:00

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕಾರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸವಾದ್ ಸುಳ್ಯ ಮೂಲತ ಸುಳ್ಯದ ಗಾಂಧಿನಗರದವರು. ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸುಳ್ಯ ಸರಕಾರಿ ಪ್ರೌಢ ಶಾಲೆಯ ಚುನಾಯಿತ ಉಪನಾಯಕನಾಗಿ ಆಯ್ಕೆಗೊಂಡಿದ್ದರು. 10ನೇ ತರಗತಿಯಲ್ಲಿ ಚುನಾಯಿತ ನಾಯಕನಾಗಿ ಆಯ್ಕೆಯಾಗಿದ್ದರು. ಶಾಲಾ ದಿನಗಳಲ್ಲೇ ಕಾಂಗ್ರೆಸ್ ಬಾಲ ಸೇವಾದಳದಲ್ಲಿ ಸಕ್ರಿಯರಾಗಿದ್ದವರು, 2009 ರಲ್ಲಿ ತಾನು ಹೈಸ್ಕೂಲ್ ನಲ್ಲೇ ಓದುತ್ತಿರುವಾಗ ಎನ್ ಎಸ್ ಯುಐ ವಿದ್ಯಾರ್ಥಿ ಸಂಘಟನೆಯೊಂದಿಗೆ ಕೈಜೋಡಿಸಿದರು.
ಸುಳ್ಯದ ಗಾಂಧಿನಗರದಲ್ಲಿ ತನ್ನ ಪಿಯುಸಿ ಶಿಕ್ಷಣದ ಸಂದರ್ಭದಲ್ಲಿ ಎನ್ ಎಸ್ ಯುಐ ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ, ಸುಳ್ಯ ನಗರ ಅಧ್ಯಕ್ಷರಾಗಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಸರ್ವ ಕಾಲೇಜು ಸಂಘದ ಕಾರ್ಯದರ್ಶಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಅದೇ ರೀತಿ ಎನ್ ಎಸ್ ಯುಐ
ಕರ್ನಾಟಕದ ಚುನಾಯಿತ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಂಚಾಲಕರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.
ನಂತರ 2017 ರ ಸಂದರ್ಭದಲ್ಲಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ನಡೆದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಿಂತು ಗೆಲುವು ಸಾಧಿಸಿದ್ದರು.
ಅದೇ ವರ್ಷ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಸಂತ ಆಗ್ನೇಸ್ (ಸ್ವಾಯತ್ತ) ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ “ಇಂದಿರಾ” ಎಂಬ ಕಾರ್ಯಾಗಾರವು ನಡೆಸಲಾಗಿತ್ತು, ಈ ಕಾರ್ಯಕ್ರಮದ ಪ್ರಮುಖ ನಿರ್ವಹಣೆ ಮಾಡಿದವರು ಸವಾದ್ ಸುಳ್ಯ ಅವರು, ಅದೇ ರೀತಿ 2020 ರಲ್ಲಿ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೊರರಾಜ್ಯಕ್ಕೆ ತೆರಳೂವ ಹಾಗೂ ಊಟದ ವ್ಯವಸ್ಥೆಯನ್ನು ಕೂಡ NSUI ಜಿಲ್ಲಾ ಸಮಿತಿ ವತಿಯಿಂದ ಸವಾದ್ ಸುಳ್ಯ ಹಾಗೂ ಶೌನಕ್ ರೈ ಅವರ ನೇತೃತ್ವದಲ್ಲಿ ನಡೆಯಿತು, 2020ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆಯುತ್ತಿದ್ದ NEP ಶಿಕ್ಷಣ ನೀತಿಯ ಬಗ್ಗೆ ವಿರೋಧಿಸಿ ಪ್ರತಿಭಟಿಸಿದ್ದು ಇವರ ನೇತೃತ್ವದಲ್ಲಿ, ತದನಂತರ 2020 ರಲ್ಲೇ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ತದನಂತರ ಪುತ್ತೂರಿನಲ್ಲಿ “ಪ್ರೇರಣಾ” ಕಾರ್ಯಾಗಾರ , 8 ವಿಧಾನಸಭಾ ಕ್ಷೇತ್ರದಲ್ಲಿ “ಸಂವಿಧಾನ ಕಡೆ, ನಮ್ಮ ಕಡೆ” ಕಾರ್ಯಕ್ರಮ “ಚಿಂತನ-ಮಂಥನ” ಕಾರ್ಯಾಗಾರ NEP ಶಿಕ್ಷಣ ನೀತಿ ವಿರೋಧಿಸಿ “Reject NEP” ಅಭಿಯಾನ ಹಾಗೂ ಜಿಲ್ಲೆಯಲ್ಲಿ ವಿನೂತನವಾಗಿ “ಕ್ಯಾಂಪಸ್ ಗೇಟ್ ಮೀಟ್” ಅಭಿಯಾನ ಸೇರಿದಂತೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹೋರಾಟ, ಉಚಿತ ಲ್ಯಾಪ್ ಟಾಪ್ ಮತ್ತು ಅರಿವು ಲೋನ್ ವಿತರಣೆ ವಿಳಂಬವಾದಾಗ ಅದರ ವಿರುಧ್ದ ಮುಖ್ಯಮಂತ್ರಿ ಸಹಿತ ಅದಕ್ಕೆ ಸಂಬಂಧಪಟ್ಟವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿದ್ದು ಅವರ ನಾಯಕತ್ವ ಹಿಡಿದ ಕೈಗನ್ನಡಿಯಾಗಿದೆ. ಇದೀಗ ಉನ್ನತ ಮಟ್ಟದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು