10:04 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನಿವೃತ್ತ ಎಸ್‌ಪಿ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರಂಟ್ ಗೆ ಹೈಕೋರ್ಟ್ ತಡೆಯಾಜ್ಞೆ

08/07/2022, 19:21

ಮಂಗಳೂರು(reporterkarnataka.com): ನಿವೃತ್ತ ಎಸ್‌ಪಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ವಾರಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರೊಂದಿಗೆ ಜಯಂತ್ ಶೆಟ್ಟಿ ಅವರಿಗೆ ತಾತ್ಕಾಲಿಕ ರಿಲಾಕ್ಸ್ ದೊರೆತಿದೆ.

2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ಅಂದಿನ ಇನ್‌ಸ್ಪೆಕ್ಟರ್ ಜಯಂತ್ ಶೆಟ್ಟಿ ಮತ್ತು ಎಸ್‌ಐ ಶಿವಪ್ರಕಾಶ್ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಕಬೀರ್ ಉಳ್ಳಾಲ್ ಎಂಬುವರು ವಕೀಲರಾದ ಖಾಝಿ ಮುಖಾಂತರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ವಿಚಾರಾಧೀನ ನ್ಯಾಯಾಲಯ, ಜಯಂತ್ ಶೆಟ್ಟಿ ಹಾಗೂ ಶಿವಪ್ರಕಾಶ್‌ಗೆ ನೋಟಿಸ್ ಜಾರಿಗೊಳಿಸಿತ್ತು. ನ್ಯಾಯಾಲಯದ ಆದೇಶದ ವಿರುದ್ಧ ಈ ಇಬ್ಬರು ಪೊಲೀಸ್ ಅಧಿಕಾರಗಳು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಪೊಲೀಸ್ ಅಧಿಕಾರಿಗಳ ಅರ್ಜಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ಬಗ್ಗೆ ಕಬೀರ್ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ನಡೆಸಿ, ಮರು ತನಿಖೆ ನಡೆಸುವಂತೆ ಆದೇಶಿಸಿ, ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ಆ ಪ್ರಕಾರ ಶಿವಪ್ರಕಾಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಜಯಂತ್ ಶೆಟ್ಟಿಗೆ ಯಾವುದೇ ನೋಟಿಸ್ ಸಿಕ್ಕಿರಲಿಲ್ಲ. ಈ ಮಧ್ಯೆ ವಿಚಾರಾಧೀನ ನ್ಯಾಯಾಲಯ ಜೂ.20ರಂದು ಜಯಂತ್ ಶೆಟ್ಟಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರ ಮೂಲಕ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. 

ಜಯಂತ್ ಶೆಟ್ಟಿ ತಮ್ಮ ವಕೀಲ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ನನಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲು ಸೆಕ್ಷನ್ 197ಸಿಆರ್‌ಪಿಸಿ ಹಾಗು 170 ಪೊಲೀಸ್ ಕಾಯ್ದೆಯಡಿ ಅನುಮತಿ ಪಡೆದಿಲ್ಲ. ಆದ್ದರಿಂದ ಪ್ರಕರಣವನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯದಲ್ಲಿ  ವಿನಂತಿಸಿಕೊಂಡಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಇಡೀ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ ಎಂದು ಜಯಂತ್ ಶೆಟ್ಟಿ ಪರ ವಕೀಲರಾದ ಪದ್ಮರಾಜ್ ಆರ್. ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು