ಇತ್ತೀಚಿನ ಸುದ್ದಿ
ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥ: ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್
10/07/2021, 07:40
ಮಂಗಳೂರು(reporterkarnataka news): ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ 2021ರ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಲೋಕ್ ಆದಾಲತ್‍ನಲ್ಲಿ ಭಾಗವಹಿಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮಂಗಳೂರಿನಲ್ಲಿರು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯವನ್ನು ಆನ್‍ಲೈನ್ ವೀಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಮ್.ಎಸ್, ವಾಟ್ಸ್ ಆಪ್, ಎಲೆಕ್ಟ್ರಾನಿಕ್ ಮೋಡ್‍ನಲ್ಲಿ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ನಗರದ ಕೋಡಿಯಾಲ್‍ಬೈಲ್‍ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಹಾಗೂ ದೂ.ಸಂ: 0824-2448111, ಮೊ.ಸಂ:9480024188 ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲ್ಲೂಕು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.