1:51 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥ:  ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್

10/07/2021, 07:40

ಮಂಗಳೂರು(reporterkarnataka news): ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ 2021ರ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
 ಸಾರ್ವಜನಿಕರು  ಈ ಲೋಕ್ ಆದಾಲತ್‍ನಲ್ಲಿ ಭಾಗವಹಿಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮಂಗಳೂರಿನಲ್ಲಿರು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. 
 ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯವನ್ನು ಆನ್‍ಲೈನ್ ವೀಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಮ್.ಎಸ್, ವಾಟ್ಸ್ ಆಪ್, ಎಲೆಕ್ಟ್ರಾನಿಕ್ ಮೋಡ್‍ನಲ್ಲಿ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. 
 ಹೆಚ್ಚಿನ ಮಾಹಿತಿಗೆ ನಗರದ ಕೋಡಿಯಾಲ್‍ಬೈಲ್‍ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಹಾಗೂ ದೂ.ಸಂ: 0824-2448111, ಮೊ.ಸಂ:9480024188 ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲ್ಲೂಕು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು