8:57 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೋಲೀಸರ ವಶದಿಂದ ಪರಾರಿ: ಆರೋಪಿಗೆ 5 ವರ್ಷ ಕಾರಾಗೃಹ ಶಿಕ್ಷೆ, ದಂಡ

04/03/2026, 20:28

ಸುಳ್ಯ(reporterkarnataka.com): ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೋಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್ ಸಿ ಜೆ ಮತ್ತು ಜೆ ಎಂಎಫ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಕಲಂ: 121(1), 132,262 BNS ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ ಅಲಿಯಾಸ್ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಸುಳ್ಯದ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿ. ಮೋಹನ್ ಬಾಬು ಅವರು ಆರೋಪಿಗೆ ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.
ಕಲಂ 132ರಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಮಾಡಿದ ಹಲ್ಲೆಗಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾತೆ.
ಕಲಂ262 ರಲ್ಲಿ ಕಾನೂನುಬದ್ಧವಾಗಿ ವಶಕ್ಕೆ ಪಡೆಯುವ ಸಂದರ್ಭದಲ್ಲಿ ತಡೆಯುಂಟು ಮಾಡಿದ್ದಕ್ಕಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ‌ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಿ ಎಂ.ಸಿ ಅವರು ವಾದ ಮಂಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು