ಇತ್ತೀಚಿನ ಸುದ್ದಿ
ಅಕ್ಟೋಬರ್ 16ಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಡಿಕೆಶಿ ಮತ್ತೆ ಸ್ಪರ್ಧಿಸುತ್ತಾರಾ?
13/09/2022, 18:58
ರಾಯಚೂರು(reporterkarnataka.com):ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 16ರಂದು
ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ನನ್ನ ಅಧಿಕಾರಾವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 16 ರಂದು ಚುನಾವಣೆ ನಡೆಯಲಿದೆ.
ನಾನು ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಬೆಂಬಲಿಗರು ಬಯಸಿದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಬಗ್ಗೆ ಆಲೋಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿಯವರಿಗೆ ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಪ್ರೀತಿ ಜಾಸ್ತಿ ಇರುವುದರಿಂದ ನಮ್ಮ ವಿರುದ್ಧ ಆರೋಪ ಮಾಡುತ್ತಾರೆ. ಆದರೆ, ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.