11:32 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಒಡಿಶಾ | ಏ.22, 23ರಂದು 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ: ಸ್ಪೀಕರ್ ಖಾದರ್

20/04/2026, 21:36

ಮಂಗಳೂರು(reporterkarnataka.com): ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಮುಂಬಯಿಯಲ್ಲಿ ಒಂದು ಸಭೆ ನಡೆದಿತ್ತು. ಇದೀಗ ಎರಡನೇ ಸಭೆ ಒಡಿಶಾದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ, ನಾಗಾಲ್ಯಾಂಡ್, ಕರ್ನಾಟಕ ಸೇರಿದಂತೆ 5 ರಾಜ್ಯಗಳ ಸ್ಪೀಕರ್‌ಗಳು ಭಾಗವಹಿಸಲಿದ್ದಾರೆ. ಒಂದು ವರ್ಷದ ಒಳಗೆ ಈ ಸಮಿತಿ ಲೋಕಸಭಾ ಅಧ್ಯಕ್ಷರಿಗೆ ವರದಿ ನೀಡಬೇಕಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿಕ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದರು.
ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಬಹುಮತವಿಲ್ಲದೆ ಬಿದ್ದುಹೋದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್, ಸಂವಿಧಾನಬದ್ಧ ತೀರ್ಮಾನಗಳು ಹಾಗೂ ಚರ್ಚೆಗಳ ಮೂಲಕ ಯಾವುದೇ ಪ್ರದೇಶದ ಜನರು, ಸಮುದಾಯಗಳಿಗೆ ಅನ್ಯಾಯವಾಗಬಾರದು ಎನ್ನುವುದು ಮುಖ್ಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು