6:59 PM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಒಡಿಶಾ ಬಾಲಸೋರ್ ರೈಲು ದುರಂತ: ಸಾವು ನೋವಿನ ಬಗ್ಗೆ ಮಂಗಳೂರು ಬಿಷಪ್ ಸಂತಾಪ

05/06/2023, 19:48

ಮಂಗಳೂರು(reporterkarnataka.com): ಒಡಿಶಾದ ಬಾಲ ಸೋರ್ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ದುರಂತದ ಬಗ್ಗೆ ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಆಘಾತ ವ್ಯಕ್ತ ಪಡಿಸಿದ್ದು, 275 ಮಂದಿ ಸಾವನ್ನಪ್ಪಿ ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತಪಟ್ಟವರ ಆತ್ಮಕ್ಕೆ ಚಿರ ಶಾಂತಿ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಹಾಗೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ ಎಂದವರು ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬಿಷಪ್ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ನಡೆದ ಈ ತ್ರಿವಳಿ ರೈಲು ಅಪಘಾತದಲ್ಲಿ 17 ಬೋಗಿಗಳು ಹಳಿ ತಪ್ಪಿದ್ದು ಈ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದವರು ಸಾವು ನೋವು ಅನುಭವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು