9:02 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ: ಸಿಎಂ ಕುರಿತು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ

17/07/2024, 15:04

ಮಂಗಳೂರು(reporterkarnataka.com): ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ. ನಾನು ಅವರೊಂದಿಗೆ ಮಂತ್ರಿಯಾಗಿ, ಎಂಪಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ವಾಸ್ತವ ಸತ್ಯವನ್ನು ಯಾರು ಕೂಡ
ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನವರು ತಿದ್ದಿಕೊಂಡರೆ ಅವರು ಹಳೆಯ ಸಿದ್ದರಾಮಯ್ಯ ಆಗುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಮಂಗಳೂರು ಸೆಂಟ್ರಲ್ ಹಾಗೂ ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ಲಾಟ್ ಫಾರ್ಮ್, ಆಹಾರ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ ಗಳು ಹೇಗೆ ಕಾರ್ಯ ನಿರ್ವಹಿಸುತ್ತದೆಯೋ ಅದೇ ರೀತಿ ನಮ್ಮ ರೈಲ್ವೆ ಇಲಾಖೆಯಲ್ಲಿಯೂ ವಿಪತ್ತು ನಿರ್ವಹಣಾ ತಂಡ ಕಾರ್ಯ ನಿರ್ವಹಿಸುತ್ತವೆ. ಅದಕ್ಕಾಗಿ ವಾರ್ ರೂಮ್ ಗಳನ್ನು ತೆರೆದಿದ್ದೇವೆ. ಅದೇ ರೀತಿ ಪ್ರತಿ ಯೊಂದು ಎಲ್ಲ ಕಡೆಯಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ, ಈ ಬಾರಿ ಅತೀ ಹೆಚ್ಚು ಮಳೆಯಾಗುತ್ತಿದೆ. ಜಿಲ್ಲಾಧಿಕಾರಿಗಳ ಜೊತೆ ನಮ್ಮ ಇಲಾಖೆಯು ಕೈ ಜೋಡಿಸಲಿದೆ. ಎಂದು ಅವರು ಹೇಳಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು