1:19 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಒಳ್ಳೆಯ ಕೆಲಸಗಳ ಜತೆ ಯಾವಾಗಲೂ ನಾನಿದ್ದೇನೆ: ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್

08/02/2023, 18:43

ಕಲ್ಲಡ್ಕ(reporterkarnataka.com): ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಬಂಟ್ವಾಳ ತಾಲೂಕು ವಿಟ್ಲಮುಡ್ನರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತನ್ನ ಅನುದಾನದಲ್ಲಿ ಸುಮಾರು 14 ಲಕ್ಷ ವೆಚ್ಚದ ನಿರ್ಮಾಣಗೊಳ್ಳಲಿರುವ ಕಲಿಕಾ ಕೊಠಡಿಯ ಶಿಲನ್ಯಾಸ ಮಾಡಿ, ಮುತ್ತೊಟ್ಟು ಫೈನಾನ್ಸ್ ವತಿಯಿಂದ ನಿರ್ಮಿಸಲ್ಪಟ್ಟ ಬಾಲವನವನ, ಹಾಗೂ ವಿಟ್ಲ ಮುಡ್ನರು ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ನಿರ್ಮಿಸಲ್ಪಟ್ಟ ಶಾಲಾ ಆವರಣ ಗೋಡೆ ಹಾಗೂ ಆಟದ ಮೈದಾನ ವಿಸ್ತರಣಾ, ಹರೀಶ್ ಮುಜಾಲ ಒದಗಿಸಿಕೊಟ್ಟ ಬಾಸ್ಕೆಟ್ ಬಾಲ್ ಕ್ರೀಡಾ ಸಲಕರಣೆ ಮೊದಲಾದ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತಾಡಿದರು.

ತನ್ನ ಕ್ಷೇತ್ರದ ಹಳ್ಳಿ ಪ್ರದೇಶದ ಏಮಾಜೆ ಶಾಲೆಯನ್ನು ಬಾಲವನ ನಿರ್ಮಿಸಲು ಆಯ್ಕೆ ಮಾಡಿ ಬಹಳ ಸುಂದರವಾಗಿ ಬಾಲವನ ನಿರ್ಮಿಸಿಕೊಟ್ಟ ಮುತ್ತೂಟ್ ಫೈನಾನ್ಸಿನ ಸಂಸ್ಥೆಯನ್ನು ಶಾಸಕರು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಟ್ಲ ಮುಟ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಗೆ ಸಹಕರಿಸಿದ ವಿವಿಧಗಣ್ಯರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಪಂಚಾಯತ್ ಸದಸ್ಯರಾದ ಸವಿತಾ ಡಿ ಪೂಜಾರಿ, ಧನಂಜಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ ಮೈಕೆ, ಮುತ್ತೂಟ್ ಫೈನಾನ್ಸಿನ ಪುತ್ತೂರು ಕ್ಲಸ್ಟರ್ ಮೆನೇಜರ್ ಸಂದೇಶ್ ಶೆಣೈ, ಪುತ್ತೂರು ಬ್ರಾಂಚ್ ಮ್ಯಾನೇಜರ್ ನವೀನ್ ಎ., ಪ್ರಸಾದ್ ಕುಮಾರ್ (ಮೆನೇಜರ್ ಸಿ ಎಸ್ ಆರ್ ಮಂಗಳೂರು), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು