8:04 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಒಳ್ಳೆಯ ಸಂಸ್ಕಾರ ಕಲಿತರೆ ಜವಾಬ್ದಾರಿಯುತ ‌ವ್ಯಕ್ತಿಯಾಗಲು ಸಾಧ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್

03/10/2021, 20:00

ಕಾರ್ಕಳ(reporterkarnataka.com): ಮಕ್ಕಳು ಒಳ್ಳೆಯ ಸಂಸ್ಕಾರ ಕಲಿತರೆ ಮುಂದಿನ ದಿನಗಳಲ್ಲಿ ಒಳ್ಳೆಯ ಜವಾಬ್ದಾರಿಯುತ ಶ್ರೇಷ್ಠ ವ್ಯಕ್ತಿಯಾಗುತ್ತಾನೆ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.

ಅವರು ಕಾರ್ಕಳ ತಾಲೂಕಿನ ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ನಮ್ಮ ಫ್ರೆಂಡ್ಸ್ ಮುಂಡ್ಕೂರು’ ಇದರ “25ನೇ ಹೆಜ್ಜೆಯ ಸಂಭ್ರಮ”ದ ಅಂಗವಾಗಿ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಡಾ. ಪಿ.ಬಾಲಕೃಷ್ಣ ಆಳ್ವ ಅವರು, ಮುಂಡ್ಕೂರು ಸ.ಹಿ.ಪ್ರಾ.ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ 21 ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಧನ ಸಹಾಯ ನೀಡಿದ ತಂಡಕ್ಕೆ ಶುಭಾಶಂಸನೆ ಸಲ್ಲಿಸಿದರು.

ಕಜೆ ಮಾರಿಗುಡಿಯ ಗೌರವಾಧ್ಯಕ್ಷ ಎಂ.ಜಿ.ಕರ್ಕೇರ, ಚಂದ್ರಹಾಸ ಶೆಟ್ಟಿ, ನಮ್ಮ ಫ್ರೆಂಡ್ಸ್ ಮುಂಡ್ಕೂರು ತಂಡದ ಅಧ್ಯಕ್ಷ ಪ್ರಕಾಶ್ ನಾಯ್ಕ್, ಕಾರ್ಯದರ್ಶಿ ಅರುಣ್ ರಾವ್, ಗೌರವ ಸಲಹೆಗಾರರಾದ ಪ್ರಭಾಕರ ಶೆಟ್ಟಿ ಕೊಂಡಲ್ಲಿ, ಉದಯ್ ಕುಮಾರ್, ಶರತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಭಟ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ, ಶ್ರೀಮತಿ ಲಲಿತಾ, ಪ್ರಮೋದ್ ಕಜೆ, ಪ್ರಶಾಂತ್ ಆಚಾರ್ಯ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು