12:46 PM Thursday31 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ಓಮಿಕ್ರಾನ್ ಭೀತಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್ಲ ಸೇವೆಗಳು ರದ್ದು: ವಾರಾಂತ್ಯ ದರ್ಶನಕ್ಕೂ ಅವಕಾಶ ಇಲ್ಲ

06/01/2022, 17:09

ಸುಬ್ರಹ್ಮಣ್ಯ(reporterkarnataka.com):ದೇಶದಾದ್ಯಂತ ಹರಡುತ್ತಿರುವ ಓಮಿಕ್ರಾನ್ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಮತ್ತು ದ.ಕ. ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.6ರಿಂದ ಮುಂದಿನ ಆದೇಶದ ವರೆಗೆ ಯಾವುದೇ ಸೇವೆಗಳು ನಡೆಯವುದಿಲ್ಲ.

ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶವಿರುತ್ತದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಶನಿವಾರ, ಭಾನುವಾರ ದರುಶನ ಇಲ್ಲ:

ದೇವರ ದರ್ಶನಕ್ಕೆ ಒಂದು ಬಾರಿಗೆ 50  ಮಂದಿ ಭಕ್ತರಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿoದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ. ಶ್ರೀ ದೇವಳದಲ್ಲಿ ಸಂಬoಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನoತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಸಹಕರಿಸಿ: ದೇವಳದಲ್ಲಿ ಪ್ರಧಾನ ದೇವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತಿತರ ಪರಿವಾರ ದೇವರುಗಳ ಗುಡಿಗಳಲ್ಲಿ ಸಂಬoಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನoತೆ ನಡೆಯುವುದು. ಶ್ರೀ ದೇವಳದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸಿಂಗ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್-19 ನಿಯಮಾವಳಿಗಳನ್ನು ಅಸನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಲಾಗಿದೆ. ಶ್ರೀ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಖಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು