4:48 AM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಓಮಿಕ್ರೋನ್: ವೆನ್‌ಲಾಕ್ ಆಸ್ಪತ್ರೆ ಸನ್ನದ್ಧ ಸ್ಥಿತಿಯಲ್ಲಿರಿಸಲು ಜಿಲ್ಲಾಧಿಕಾರಿ ಸೂಚನೆ

05/01/2022, 23:40

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಹಾಗೂ ಅದರ ರೂಪಾಂತರಿ ಓಮಿಕ್ರೋನ್ ಪ್ರಕರಣಗಳ ವರದಿಯ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿಯೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ವೆನ್‌ಲಾಕ್ ಜಿಲ್ಲಾಸ್ಪತ್ರೆ ಸದಾ ಸನ್ನದ್ದವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆಸ್ಪತ್ರೆಯ ಜಿಲ್ಲಾ ಸರ್ಜನ್‌ಗೆ ಸೂಚನೆ ನೀಡಿದರು.  

ಅವರು ಬುಧವಾರ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಜ್ಞರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ವೆನ್‌ಲಾಕ್‌ನಲ್ಲಿ ಇದೀಗ ನೀಡಲಾಗುತ್ತಿರುವ ಗುಣಮಟ್ಟದ ಚಿಕಿತ್ಸೆಯಂತೆಯೇ ಕೊರೋನಾ ಹಾಗೂ ಅದರ ರೂಪಾಂತರಿ ಸೋಂಕುಗಳು ಹೆಚ್ಚಾದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ದಾಖಲಾಗುವ ರೋಗಿಗಳನ್ನು ಆರೈಕೆ ಮಾಡಿ ಗುಣಪಡಿಸಬೇಕು, ಅದಕ್ಕಾಗಿ ಅಲ್ಲಿರುವ ಮೂಲಭೂತ ಸೌಕರ್ಯಗಳು ಹಾಗೂ ಮಾನವ ಸಂಪನ್ಮೂಲಗಳ ಬಗ್ಗೆ ಭಾರತೀಯ ವೈದ್ಯಕೀಯ ಸಂಘ ಹಾಗೂ ಮೆಡಿಕಲ್ ಕಾಲೇಜುಗಳ ಪರಿಣತರ ತಂಡದಿಂದ ತಪಾಸಣೆ ನಡೆಸಿ ವರದಿ ಪಡೆಯುವಂತೆ ಅವರು ಸೂಚಿಸಿದರು. 

ಚಿಕಿತ್ಸೆಯ ವಿಷಯಕ್ಕೆ ಸಂಬಂಧಿಸಿದಂತೆ ವೆನ್‌ಲಾಕ್‌ನಲ್ಲಿ ಯಾವುದೇ ಕೊರತೆ ಎದುರಾಗಬಾರದು, ವೈದ್ಯಕೀಯ ಆಮ್ಲಜನಕದ ಉತ್ಪಾದನೆ, ಈಗಾಗಲೇ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಕಾನ್ಸಂಟ್ರೆರ‍್ಸ್ಗಳ ಕಾರ್ಯವೈಖರಿಗಳನ್ನು ಪರಿಶೀಲಿಸಿಕೊಳ್ಳಬೇಕು. ಉತ್ಪಾದನಾ ಘಟಕಗಳಲ್ಲಿ ಆಮ್ಲಜನಕ ಸಂಪೂರ್ಣವಾಗಿ ಬರಿದಾಗದಂತೆ ಎಚ್ಚರ ವಹಿಸುವುದು, ಆಂಬುಲೆನ್ಸ್ ಗಳ

 ಸ್ಥಿತಿಗತಿಗಳು, ವೆಂಟಿಲೇಟರ್‌ಗಳ ಕಾರ್ಯ ವೈಖರಿ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಕಾನ್ಸ್ಂಟ್ರೆರ‍್ಸ್ಗಳನ್ನು ಬೆಡ್‌ಗಳಿಗೆ ಹಾಕಿ ಡ್ರೆöÊರನ್ ಮಾಡಿಸುವ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು, ತಾಲೂಕು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಸರಬರಾಜಿನ ಬಗ್ಗೆ ಎಚ್ಚರಿಕೆಗಳನ್ನು ವಹಿಸುವಂತೆ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

 ಪ್ರತಿಯೊಂದು ಆಮ್ಲಜನಕ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿ, ಅವುಗಳ ಕಾರ್ಯಾಚರಣೆಯ ವರದಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು, ಖಾಸಗಿ ಆಸ್ಪತ್ರೆಗಳ ಅಪ್‌ಗ್ರೆಡೆಷನ್, ಅಲ್ಲಿರುವ ಲ್ಯಾಬ್‌ಗಳು, ವೆಂಟಿಲೇಟರ್, ಆಕ್ಸಿಜನ್ ಘಟಕಗಳ ಬಗ್ಗೆ ವರದಿಯೊಂದನ್ನು ನೀಡುವಂತೆ ಡಿಎಚ್‌ಒಗೆ ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ಜನ್ ಡಾ. ಸದಾಶಿವ್ ಶ್ಯಾನ್‌ಭೋಗ್, ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್, ಡಿಎಸ್‌ಒ ಜಗದೀಶ್, ಕೆಎಂಸಿ, ಬಿ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜುಗಳ ತಜ್ಞರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು