4:59 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಒಂದೇ ಮಳೆಗೆ ಮಂಗಳೂರು ರಥಬೀದಿ ರಸ್ತೆ ತುಂಬಾ ನೀರು:  ಕೊರೊನಾ ಮಧ್ಯೆ ಜನರ ಪರದಾಟ !!

15/05/2021, 10:11

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನ ರಥಬೀದಿ, ಕುದ್ರೋಳಿ, ಅಳಕೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ನಿಂತಿದೆ.

ಸ್ಮಾರ್ಟ್ ಸಿಟಿ ವತಿಯಿಂದ ರಥಬೀದಿಯಲ್ಲಿ ಇತ್ತೀಚೆಗೆ ಕಾಮಗಾರಿ ನಡೆದಿತ್ತು. ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲು ಹಾಕಿ ಶೃಂಗಾರಗೊಳಿಸಲಾಗಿತ್ತು. ಆದರೆ ಎಲ್ಲ ಬಣ್ಣವನ್ನು ಮಸಿ ನುಂಗಿತು ಎನ್ನುವ ಹಾಗೆ ಮೊದಲ ಮಳೆಗೆ ನೀರು ಹೋಗಲು ಜಾಗವಿಲ್ಲದೆ, ಅಲ್ಲಲ್ಲಿ ರಸ್ತೆಯಲ್ಲೇ ಮಳೆ ನೀರು ನಿಂತಿದೆ. ಇದರಿಂದ ವಾಹನ ಸವಾರರಿಗೆ, ಅದರಲ್ಲೂ ಮುಖ್ಯವಾಗಿ ಪಾದಚಾರಿಗಳಿಗೆ ಬಹಳಷ್ಟು ತೊಂದರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು