4:09 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು