1:19 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

13/12/2024, 14:23

ಹೊಸದಿಲ್ಲಿ(reporterkarnataka.com): ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ. ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ರು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು