9:04 AM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಒಂದೂವರೆ ವರ್ಷದ ಬಳಿಕ ನಂಜನಗೂಡು ನಗರಸಭೆಯ ಸಾಮಾನ್ಯ ಸಭೆ: ನಾಯಿ ಹಿಡಿಯಲು 40 ಲಕ್ಷ ರೂ. ಖರ್ಚು ಮಾಡಿದ ಅಧಿಕಾರಿಗಳು; ಶಾಸಕ ದರ್ಶನ್ ಧ್ರುವನಾರಾಯಣ್ ತರಾಟೆ

15/10/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಳೆದ ಒಂದೂವರೆ ವರ್ಷದ ಬಳಿಕ ನಗರಸಭೆಯ ನೂತನ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಾಮಾನ್ಯ ಸಭೆ ನಡೆಯಿತು.
ಸಭೆಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಸಾಥ್ ನೀಡಿದರು.
ಕಳೆದ ಒಂದೂವರೆ ವರ್ಷದಿಂದ ನಗರ ಸಭೆಯಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಲ್ಲದೆ ಅಧಿಕಾರಿಗಳದ್ದೇ ಅಂದಾ ದರ್ಬಾರ್ ಆಗಿದ್ದು ಈಗ ಅದಕ್ಕೆ ತೆರೆ ಬಿದ್ದಂತಾಗಿದೆ. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಎಲ್ಲಾ ವಾರ್ಡ್ ಗಳ ಸದಸ್ಯರು ಅಧಿಕಾರಿಗಳ ವಿರುದ್ಧ ಸಿಡಿದೆದ್ದು ಅಧಿಕಾರಿಗಳು ಯಾವುದೇ ಸದಸ್ಯರ ಮಾತಿಗೂ ಸ್ಪಂದಿಸದೆ ವಾರ್ಡ್ಗಳಲ್ಲಿ ಕೆಲಸಗಳನ್ನು ಮಾಡದೆ ಸ್ವೇಚ್ಛಾಚಾರವಾಗಿ ತಮಗಿಷ್ಟ ಬಂದಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿಸಿದರು.
ಅರ್ಧಂಬರ್ಧ ನಡೆದ ಕಾಮಗಾರಿಗಳಿಗೆ ಪೂರ್ತಿ ಬಿಲ್ ಮಾಡಿಕೊಂಡಿದ್ದಾರೆ. ಕಾಮಗಾರಿಯ ಕ್ರಿಯಾ ಯೋಜನೆಗಿಂತ ದುಪ್ಪಟ್ಟು ಲೆಕ್ಕ ತೋರಿಸುತ್ತಿದ್ದಾರೆ. ಸದಸ್ಯರುಗಳ ಗಮನಕ್ಕೂ ಬಾರದೆ ಯಾವುದೇ ಅನುಮತಿ ನೀಡದೆ ಹೋಟೆಲ್, ಲಾಡ್ಜ್ ಹಾಗೂ ಕಮರ್ಷಿಯಲ್ ಮಳಿಗೆಗಳಿಂದ ಅಕ್ರಮ ಹಣ ಪಡೆದು ಅವುಗಳನ್ನು ನಡೆಸುವಲ್ಲಿ ಸಹಕರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಪಟ್ಟಣದಲ್ಲಿ ನಾಯಿಗಳನ್ನು ಹಿಡಿಯಲು 40 ಲಕ್ಷ ರೂಪಾಯಿ ಲೆಕ್ಕ ತೋರಿಸಿದ್ದಾರೆ. ಇದನ್ನು ನೋಡಿದರೆ ನಗರಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ನಾಯಿ ಹಿಡಿಯುವುದೇ ವಾಸಿ ಎಂದು ಸದಸ್ಯ ಕಪಿಲೇಶ್ ಛೇಡಿಸಿದರು. ಇಂತಹ 10 ಹಲವಾರು ಕಾರಣಗಳಿಗಾಗಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ. ಇವೆಲ್ಲವನ್ನು ತನಿಖೆಗೆ ಒಳಪಡಿಸಬೇಕು ಎಂದು ಶಾಸಕರಲ್ಲಿ ಸದಸ್ಯರುಗಳು ಮನವಿ ಮಾಡಿಕೊಂಡರು.
ಇದೊಂದು ಅಧಿಕಾರಿಗಳ ಅಕ್ರಮಗಳನ್ನು ಸಕ್ರಮಗೊಳಿಸುವ ಸಭೆಯಾಗಿದೆ ಎಂದು ಅಧಿಕಾರಿಗಳ ಅಕ್ರಮಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.
ಎಲ್ಲಾ ಸದಸ್ಯರುಗಳ ಆರೋಪಗಳನ್ನು ಆಲಿಸಿದ ಶಾಸಕರು ನನಗೂ ಕೂಡ ಇದರಲ್ಲಿ ಅಕ್ರಮ ಅವ್ಯವಹಾರ ನಡೆದಿದೆ ಎಂದು ಸ್ಪಷ್ಟವಾಗುತ್ತಿದೆ. ಅದಕ್ಕಾಗಿ ತಮ್ಮೆಲ್ಲರ ಸಹಕಾರದಿಂದ ಇದನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಸದಸ್ಯರಿಗೆ ಆಶ್ವಾಸನೆ ನೀಡಿದರು.


ಅಲ್ಲದೆ ಕೆಲವು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾದ ಶಾಸಕರಿಗೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬಾರದ ಕಾರಣ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಮೂಲಕ ಚಳಿ ಬಿಡಿಸಿ ಮುಂದೆ ಎಲ್ಲಾ ವಾರ್ಡ್ಗಳಿಗೂ ಭೇಟಿ ಕೊಟ್ಟು ಸದಸ್ಯರು ಹೇಳಿದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಮಾಡಬೇಕು ಎಂದು ತಾಕೀತು ಮಾಡಿದರು.
ನಗರಸಭಾ ಆಯುಕ್ತ ನಂಜುಂಡಸ್ವಾಮಿ, ಉಪಾಧ್ಯಕ್ಷೆ ರಿಯಾನ್ ಬಾನು ಸೇರಿದಂತೆ ಸದಸ್ಯರುಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು