2:32 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ

07/03/2026, 21:41

ಮೈಸೂರು(reporterkarnataka.com): ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

*ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರನ್ನು ಅಭಿನಂದಿಸಿದ ಸಿಎಂ*
ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು.ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

*ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ*
ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ. ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

*ಸಮಾನತೆ ಸ್ಥಾಪಿಸುವುದೇ ಸರ್ಕಾರದ ಯೋಜನೆಗಳ ಗುರಿ*
ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ದೊರೆತಾಗ ಮಾತ್ರ ಸಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು