8:00 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಾಲದ ಒನ್ ಟೈಮ್ ಸೆಟಲ್ ಮೆಂಟ್: ರೈತರ ಜತೆ ಸೌಜನ್ಯದಿಂದ ವರ್ತಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ಕುಮಾರಸ್ವಾಮಿ ಸೂಚನೆ

27/06/2025, 18:07

*ಮಂಡ್ಯದಲ್ಲಿ ಜಿಲ್ಲಾ ಬ್ಯಾಂಕರುಗಳ ಸಭೆ*

*ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಬ್ಯಾಂಕ್ ಗಳ ಪಾತ್ರಕ್ಕೆ ಮೆಚ್ಚುಗೆ*


ಮಂಡ್ಯ(reporterkarnataka.com):
ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಬ್ಯಾಂಕುಗಳಿಗೆ ಸೂಚಿಸಿದರು.
ಮಂಡ್ಯದಲ್ಲಿ ನಡೆದ ಜಿಲ್ಲಾ ಬ್ಯಾಂಕರುಗಳ ಸಭೆಯಲ್ಲಿ ಆನ್ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು; ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಹೇಳಿದರು.
ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅನೇಕ ಯೋಜನೆಗಳ ಮೂಲಕ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗುತ್ತಿದೆ. ಅವರ ಸಬಲೀಕರಣಕ್ಕೆ ಕೇಂದ್ರ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ಜಾರಿಗೆ ತಲುಪಿಸುವ ಕೆಲಸವನ್ನು ಬ್ಯಾಂಕುಗಳು ಉತ್ತಮವಾಗಿ ಮಾಡುತ್ತಿವೆ ಎಂದು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಚಿವರು ಸಲಹೆ ನೀಡಿದರು.
ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್ ಗಳ ಮುಖ್ಯಸ್ಥರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು