9:47 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಬರೀ 40 ಶಾಸಕರಿದ್ರೆ ಮುಖ್ಯಮಂತ್ರಿಯೇ ಆಗ್ತಾರೆ!: ಕೇವಲ ಇಬ್ಬರು ಸಂಸದರಿದ್ದರೆ ಕೇಂದ್ರದಲ್ಲಿ ಸಚಿವರಾಗಿಯೇ ಬಿಡ್ತಾರೆ!!

09/06/2024, 23:01

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇಂದ್ರದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕದಿಂದ ಅವರ ಮಿತ್ರಪಕ್ಷವಾದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಚಿವರಾಗಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಮಿತ್ರಪಕ್ಷವಾದ ಜೆಡಿಯು ಮತ್ತು ತೆಲುಗುದೇಶಂ ಸಹಾಯದಿಂದ ಎನ್ ಡಿಎ ಮೈತ್ರಿಕೂಟ ಸರಕಾರದ ಮುಖ್ಯಸ್ಥರಾಗಿ ಮೋದಿ ಕಾರ್ಯನಿರ್ವಹಿಸಲಿದ್ದಾರೆ.
ಮಿತ್ರಪಕ್ಷಗಳ ಅಣತಿಯಂತೆ ಕಾರ್ಯನಿರ್ವಹಿಸುವ ಅನಿವಾರ್ಯತೆ ಮೋದಿ ಅವರಿಗಿದೆ.
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಮಣಿಸಲು ಬಿಜೆಪಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿಕೊಂಡಿತ್ತು. ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ತನ್ನ ಅಸ್ತಿತ್ವಕ್ಕೆ ಸಂಚಕಾರ ಬರುತ್ತದೆ ಎಂಬುದನ್ನು ಮನಗಂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೂಡ ಬಿಜೆಪಿ ಜತೆ ಹೋಗುವುದು ಅನಿವಾರ್ಯವಾಗಿತ್ತು. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಾದಾಗ ಜೆಡಿಎಸ್ ಪಾಲಿಗೆ 3 ಕ್ಷೇತ್ರಗಳು ದಕ್ಕಿದವು. ಆದರೆ ಮೂರರಲ್ಲಿ ಒಂದಾದ ಹಾಸನ ಕ್ಷೇತ್ರವನ್ನು ಅಲ್ಲಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದ ಕಳೆದುಕೊಳ್ಳಬೇಕಾಯಿತು. ಮಂಡ್ಯದಲ್ಲಿ ಸ್ವತಃ ಕುಮಾರಸ್ವಾಮಿ ಅವರೇ ಗೆದ್ದರು. ಕೋಲಾರದಲ್ಲಿಯೂ ಜೆಡಿಎಸ್ ಗೆಲುವು ಕಂಡಿತು. ಅಸ್ತಿತ್ವವನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದ ಜೆಡಿಎಸ್ ಗೆ ಸಂಜೀವಿನಿ ದೊರಕಿದಂತಾಯಿತು. ಮೈತ್ರಿಕೂಟ ಸರಕಾರದಲ್ಲಿ ಮೈತ್ರಿಧರ್ಮ ಪಾಲಿಸುವ ಅನಿವಾರ್ಯತೆ ಇರುವುದರಿಂದ ಎರಡು ಸಂಸದರನ್ನು ಹೊಂದಿರುವ ಜೆಡಿಎಸ್ ನ ನಾಯಕ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿಯೇ ಬಿಟ್ಟರು. ಅದೂ ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕೃಷಿ ಖಾತೆ ಅವರ ಬೇಡಿಕೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರರಾದ ಕುಮಾರಸ್ವಾಮಿ ರಾಜಕೀಯವಾಗಿ ತುಂಬಾ ಲಕ್ಕಿ ಪರ್ಸನ್. ಹೀಗೆಂತ ರಾಜ್ಯದ ಜನತೆಯೇ ಆಡಿಕೊಳ್ಳುತ್ತಾರೆ. ಕೇವಲ 40 ಶಾಸಕರನ್ನು ಕಟ್ಟಿಕೊಂಡು ಅವರು ರಾಜ್ಯದಲ್ಲಿ ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಈಗ ಎರಡು ಸಂಸದರನ್ನು ಹೊಂದಿದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ನಮ್ಮದು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ.

ಇತ್ತೀಚಿನ ಸುದ್ದಿ

ಜಾಹೀರಾತು