9:50 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

06/01/2025, 18:37

ನವದೆಹಲಿ(reporterkarnataka.com): ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.
ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದು ಅವರು ಪ್ರಶ್ನಿಸಿದರು.
ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದು ಅವರು ನುಡಿದರು.
ರಾಜ್ಯದಲ್ಲಿ ಎಂಟು ತಿಂಗಳ ಮಗುವಿನಲ್ಲಿ ಎಚ್ ಎಂವಿ ವೈರಸ್ ಪತ್ತೆಯಾಗಿರುವ ಬಗ್ಗೆ ಕೇಳಿದಾಗ, “ಈಗಾಗಲೇ ನಮ್ಮ ಆರೋಗ್ಯ ಸಚಿವರು ಕೆಲಸ ಮಾಡುತ್ತಿದ್ದಾರೆ. ಯಾರೂ ಸಹ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು