ಇತ್ತೀಚಿನ ಸುದ್ದಿ
ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ದೆಹಲಿಗೆ ಆಗಮನ
13/10/2023, 22:38

ಟೆಲ್ ಅವಿವ್(reporterkarnataka.com):ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಟೆಲ್ ಅವಿವ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಅಂಗವಾಗಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ಇಂದು ಸುರಕ್ಷಿತವಾಗಿ ಭಾರತಕ್ಕೆ ಆಗಮಿಸಿತು.
212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದಿದೆ. ಈ ನಡುವೆ ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ, ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಮಾನವು ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತು. ವಿಮಾನವು 211 ವಯಸ್ಕರು ಮತ್ತು ಒಂದು ಶಿಶುವನ್ನು ಭಾರತಕ್ಕೆ ಕರೆದು ತಂದಿದೆ.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಂತರದ ಇಸ್ರೇಲಿ ಪ್ರತೀಕಾರಕ್ಕೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆಯು 2,500 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿತು. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ.