2:26 AM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಎದುರುಪದವು: ‘ಮಿಹ್ರಜಾನುಲ್ ಬಿದಾಯ’ 2026-27ನೇ ವರ್ಷದ ಮದರಸ ಆರಂಭೋತ್ಸವ

31/03/2026, 11:04

ಮಂಗಳೂರು(reporterkarnataka.com): ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದಲ್ಲಿ “ಮಿಹ್ರಜಾನುಲ್ ಬಿದಾಯ” 2026-27ನೇ ವರ್ಷದ ಮದರಸ ಆರಂಭೋತ್ಸವ ಕಾರ್ಯಕ್ರಮ ಎದುರುಪದವಿನ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಸಭಾಂಗಣದಲ್ಲಿ ನೆರವೇರಿತು.
ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಖತೀಬ್ ಸಿರಾಜುದ್ದೀನ್ ಫೈಝಿ ಅಲ್ ಮಅಬರಿ ದುಆ ಮೂಲಕ ಉದ್ಘಾಟಿಸಿದರು. ಈ ವೇಳೆ ಮಸೀದಿ ಸದರ್ ಉಸ್ತಾದ್ ಮುಹಮ್ಮದ್ ಇಖ್ಬಾಲ್ ಮಕ್ದೂಮಿ ಫೈಝಿ ಮದರಸ ವಿದ್ಯಾಭ್ಯಾಸದ ಮಹತ್ವ ಮತ್ತು ಘನತೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಅಧ್ಯಕ್ಷರಾದ ಎ. ಪಿ ಇಕ್ಬಾಲ್, ಮುಅಲ್ಲಿಂ ಉಸ್ತಾದ್ ಅಬ್ದುಲ್ ಖಾದರ್ ಸಅದಿ, ಉಪಾಧ್ಯಕ್ಷ ಅಬ್ದುಲ್ ರಝಾಕ್ ಎ ಆರ್, ಪ್ರಧಾನ ಕಾರ್ಯದರ್ಶಿ ಸಾಜುದ್ದೀನ್, ಕೋಶಾಧಿಕಾರಿ ಇಮ್ರಾನ್ ಅಲಿ, ಹಿರಿಯರಾದ ಹಾಜಿ ಹನೀಫ್ ಮೌಲವಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು