8:31 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ‌ ಆರೋಪಿ ಹಿರಿಯಡಕ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು

11/12/2022, 22:50

ಕಾರ್ಕಳ(reporterkarnataka.com):
ವಿಚಾರಣಾಧೀನ ಕೈದಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ನಡೆದಿದೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಸಜೀವವಾಗಿ ಸುಟ್ಟು ಹತ್ಯೆಗೈದಿದ್ದರು.
ಪ್ರಕರಣವೊಂದರಲ್ಲಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದರು. ಆದರೆ ಆ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ ಸದಾನಂದ ಸೇರಿಗಾರ್ ಹಾಗೂ ಆತನ ಗೆಳತಿ ಶಿಲ್ಪ ಸಾಲಿಯಾನ್, ಸತೀಶ್ ದೇವಾಡಿಗ, ನಿತೀಶ್ ದೇವಾಡಿಗ ಜೈಲು ಪಾಲಾಗಿದ್ದರು. ಜೈಲು ಸೇರಿದ ಬಳಿಕ ಸದಾನಂದ ಸೇರಿಗಾರ್ ಬಹಳಷ್ಟು ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣದಿಂದ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಇತರ ಕೈದಿಗಳು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಕೆಳಗೆ ಇಳಿಸಿದ್ದಾರೆ. ಬಳಿಕ ಜೈಲು ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದಾರಿ ಮಧ್ಯೆ ಸದಾನಂದ ಸೇರಿಗಾರ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಅಜ್ಜರಕಾಡು ಶವಗಾರದಲ್ಲಿ ಇರಿಸಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಎಸ್‌.ಟಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ್ ಮತ್ತು ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು