6:00 PM Sunday23 - March 2025
ಬ್ರೇಕಿಂಗ್ ನ್ಯೂಸ್
FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ,… ಹನಿಟ್ರ್ಯಾಪ್ ಪ್ರಕರಣ: ವಿಧಾನ ಸಭೆಯಲ್ಲಿ ಬಿಜೆಪಿ- ಜೆಡಿಎಸ್ ನಿಂದ ಭಾರೀ ಪ್ರತಿಭಟನೆ; ಸ್ಫೀಕರ್… ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ… ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ

22/03/2025, 09:01

ಬೆಂಗಳೂರು(reporterkarnataka.com): ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ,2025-26 ರಲ್ಲಿ ನಮ್ಮ ಸರ್ಕಾರ ಮಂಡಿಸಿದ ಬಜೆಟ್ ಬಡವರ, ಮಹಿಳೆಯರ, ಮಕ್ಕಳ, ಶೋಷಿತರ, ದುರ್ಬಲ ವರ್ಗದವರ, ಯುವಜನರ, ಕಾರ್ಮಿಕರ, ರೈತರ, ಹಿಂದುಳಿದವರ, ಅಲ್ಪಸಂಖ್ಯಾತರ ಏಳಿಗೆ, ಹಿತರಕ್ಷಣೆಯನ್ನು ಗಮನದಲ್ಲಿ ಇಟ್ಟುಕೊಂಡು ತಯಾರಿಸಿದ್ದಾಗಿದೆ .ಜೊತೆಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುವ ಮೂಲಕ ರಾಜ್ಯವನ್ನು ಸಮಗ್ರ ಹಾಗೂ ಸುಸ್ಥಿರ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಆಶಯದೊಂದಿಗೆ ಮಂಡಿಸಲಾಗಿದೆ ಎಂದರು.
ನಮ್ಮ ಸರ್ಕಾರ ಮಂಡಿಸಿರುವ ಆಯವ್ಯಯವು ಗ್ಯಾರಂಟಿ ಯೋಜನೆಗಳ ಜೊತೆಗೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರಿಗೆ ತಲಾ 1000 ರೂ, ಅತಿಥಿ ಉಪನ್ಯಾಸಕರು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ತಲಾ 2000 ರೂ ಪತ್ರಕರ್ತರಿಗೆ ತಲಾ 3000 ರೂ, ಕಲಾವಿದರಿಗೆ ತಲಾ 500 ರೂ, ಕುಸ್ತಿ ಪಟುಗಳಿಗೆ ತಲಾ 1000 ರೂ ಹೆಚ್ಚು ಮಾಡಿದ್ದೇವೆ. ಎಲ್ಲಾ ಧರ್ಮದ ಪುರೋಹಿತರಿಗೆ ಸಮಾನವಾಗಿ ಮಾಸಿಕ 6000 ರೂ ಗೌರವಧನ ನೀಡಲು ಉದ್ದೇಶಿಸಲಾಗಿದೆ. ಇಷ್ಟರ ನಡುವೆ, ಬಂಡವಾಳ ವೆಚ್ಚಗಳಿಗೆ ಈ ವರ್ಷ 83,200 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. ಇಷ್ಟಾದರೂ ಸಹ, ನಮ್ಮ ವಿತ್ತೀಯ ಶಿಸ್ತು ನಿಯಮಗಳಿಗೆ ಅನುಗುಣವಾಗಿಯೇ ಇದೆ.
2025-26ನೇ ಸಾಲಿಗೆ ಸಂಬಂಧಪಟ್ಟಂತೆ ಒಟ್ಟಾರೆ ರಾಜ್ಯದ ರಾಜಸ್ವ ಸ್ವೀಕೃತಿ 2,92,470 ಕೋಟಿ ರೂ. ಗಳಷ್ಟಾದರೆ ರಾಜಸ್ವ ವೆಚ್ಚ 3,11,739 ಕೋಟಿ ರೂ. ಆಗಬಹುದು. ಇದರಿಂದ 19,262 ಕೋಟಿ ರೂ.ಗಳಷ್ಟು ರಾಜಸ್ವ ಕೊರತೆ ಆಗಲಿದೆ ಎಂಬುದು ಅಂದಾಜು. ಇದು ಕಡಿಮೆ ಆಗಲೂಬಹುದು. 2024-25ರ ಬಜೆಟ್ ಮಂಡಿಸಿದಾಗ 27,354 ಕೋಟಿ ರೂ.ಗಳಷ್ಟು ರೆವೆನ್ಯೂ ಡಿಫಿಸಿಟ್ ಆಗಬಹುದೆಂದು ಅಂದಾಜು ಮಾಡಲಾಗಿತ್ತು. ಆದರೆ ಪರಿಷ್ಕೃತ ಅಂದಾಜಿನಂತೆ 26,127 ಕೋಟಿ ರೂ.ಗಳಷ್ಟಾಗಬಹುದೆಂದು ಅಂದಾಜು ಮಾಡಲಾಗಿದೆ. ಒಟ್ಟಾರೆ 2024-25ಕ್ಕೆ ಹೋಲಿಸಿದರೆ 2025-26ರಲ್ಲಿ ಸುಮಾರು 8,000 ಕೋಟಿ ರೂ.ಗಳಷ್ಟು ರಾಜಸ್ವ ಕೊರತೆ ಕಡಿಮೆ ಆಗುತ್ತದೆ. 2024-25ರ ಆಯವ್ಯಯದ ಅಂದಾಜಿನಲ್ಲಿ ರಾಜಸ್ವ ಕೊರತೆಯು ಜಿ.ಎಸ್.ಡಿ.ಪಿ.ಯ ಶೇ.0.96 ರಿಂದ 2025-26ರ ಆಯವ್ಯಯದಲ್ಲಿ ಶೇ.0.63 ಕ್ಕೆ ಇಳಿಕೆಯಾಗಿದೆ ಎಂದರು.
ಬಂಡವಾಳ ಯೋಜನೆಗಳಿಗೆ ಅನುದಾನ ನೀಡಿದ ಕಾರಣ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಾಗಿರುತ್ತದೆ. ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆಯಾಗಿರುತ್ತದೆ. ಇದರಿಂದ ರಾಜ್ಯದಲ್ಲಿ ಹೂಡಿಕೆಗಳು ಹೆಚ್ಚಳವಾಗಿದ್ದು ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿರುತ್ತವೆ. ಇದರ ಪರಿಣಾಮವಾಗಿ ದೇಶದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕವು ಪ್ರಮುಖ ರಾಜ್ಯವಾಗಿದೆ. 2012-13 ರಲ್ಲಿ 57,720 ಕೋಟಿ ರೂ.ಗಳಿದ್ದ ರಾಜ್ಯದ ಸ್ವಂತ ರಾಜಸ್ವವು 2025-26 ರಲ್ಲಿ 2,24,600 ಕೋಟಿ ರೂ.ಗಳಿಗೆ ಹೆಚ್ಚಾಗಿರುತ್ತದೆ. ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ. ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು