4:59 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಪಾನಮತ್ತಳಾಗಿದ್ದ ಯುವತಿಯ ಅತ್ಯಾಚಾರಗೈದ ಕ್ಯಾಬ್ ಚಾಲಕನ ಬಂಧನ: ಪೊಲೀಸ್ ಕ್ಷಿಪ್ರ ಕಾರ್ಯಾಚರಣೆ

23/09/2021, 19:58

ಬೆಂಗಳೂರು(reporterkarnataka.com): ರಾತ್ರಿ ಪಾರ್ಟಿಯಲ್ಲಿ ಪಾನಮತ್ತಳಾಗಿದ್ದ ಯುವತಿ ಮೇಲೆ ಅತ್ಯಾಚಾರ ನಡೆಸಿದ ಕ್ಯಾಬ್ ಚಾಲಕನನ್ನು 24 ತಾಸು ಕಳೆಯುವುದರೊಳಗೆ ಪೊಲೀಸರು ಬಂಧಿಸಿದ್ದಾರೆ.

ಬುಧವಾರ ರಾತ್ರಿ ಪಾರ್ಟಿ ಮುಗಿಸಿಕೊಂಡು ಮಲ್ಲೇಶ್‌ಪಾಳ್ಯದ ಮನೆಗೆ ಹೋಗಲು ಯುವತಿ ಕ್ಯಾಬ್ ಬುಕ್ ಮಾಡಿದ್ದಳು. ಕ್ಯಾಬ್ ಚಾಲಕ ದೇವರಾಜ್ ಎಂಬಾತ ಯುವತಿ ಪಾನಮತ್ತಳಾಗಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಚಾಲಕ ದೇವರಾಜ್ ಎಂಬಾತನನ್ನು ಜೀವನ್‌ ಭೀಮಾನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಜೀವನ್‌ಭಿಮಾ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು