1:07 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಪಚ್ಚನಾಡಿಯಲ್ಲಿ ಅಕ್ರಮ ಮನೆ ತೆರವಿಗೆ ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲು: ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್

11/06/2022, 15:25

ಮಂಗಳೂರು(reporterkarnataka.com):  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆ ತೆರವುಗೊಳಿಸಲು ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಹೇಳಿದರು.

ರಿಪೋರ್ಟರ್ ಕರ್ನಾಟಕ ಜತೆ ಶನಿವಾರ ಮಾತನಾಡಿದ ಅವರು, ಪಾಲಿಕೆ ಅಧಿಕಾರಿಗಳ ಕರ್ತವ್ಯಕ್ಕೆ ಯಾರೆಲ್ಲ ಅಡ್ಡಿಪಡಿಸಿದ್ದಾರೆಯೇ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ನಮ್ಮ ಅಧಿಕಾರಿಗಳು ಈಗಾಗಲೇ ಪೊಲೀಸ್ ಠಾಣೆಗೆ ತೆರಳಿದ್ದಾರೆ ಎಂದರು.

ತೆರವಿಗೆ ಅಡ್ಡಿಪಡಿಸಿದವರಲ್ಲಿ ಸ್ಥಳೀಯ ಕಾರ್ಪೊರೇಟರ್ ಸಂಗೀತಾ ನಾಯಕ್ ಅವರು ಸೇರಿರುವ ಕುರಿತು ಕಮಿಷನರ್ ಅವರ ಗಮನಕ್ಕೆ ತಂದಾಗ, ಕಾರ್ಪೊರೇಟರ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಪೊಲೀಸ್ ಕಮಿಷನರ್ ಜತೆ ಮಾತನಾಡಿ ಒಂದು ವಾರದೊಳಗೆ ಮತ್ತೆ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಅವರು ನುಡಿದರು.

ಪಾಲಿಕೆಯ ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮ ಮನೆ ನಿರ್ಮಿಸಿರುವುದು ಸರಿಯಲ್ಲ ಎಂದು ಪಾಲಿಕೆ ಕಮಿಷನರ್ ಹೇಳಿದರು.

ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ಶನಿವಾರ ಜೇಸಿಬಿ ಜತೆ ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿತ್ತು.

ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. ಇದು ಪಾಲಿಕೆಗೆ ದೊಡ್ಡ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು