4:21 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ: ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ; ಬೆಂಕಿ ನಿಯಂತ್ರಣಕ್ಕೆ ಕ್ರಮ

06/01/2023, 18:57

ಮಂಗಳೂರು(reporter Karnataka.com): ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ತ್ಯಾಜ್ಯದಿಂದ ಮಿಥೇಲ್ ಗ್ಯಾಸ್ ಹೊರಹೊಮ್ಮಿದಾಗ ವಾತಾವರಣದ ಉಷ್ಣತೆಗೆ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಾಗಿದೆ. ಇದೀಗ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜ್ವಾಲೆ ಇನ್ನಷ್ಟು ಪ್ರದೇಶಕ್ಕೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಸಂದರ್ಭದಲ್ಲಿ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು, ಪ್ರತಿ ವರ್ಷ ಬೇಸಿಗೆಯಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಿಥೇಲ್ ಗ್ಯಾಸ್ ಬಿಡುಗಡೆಯಾಗುವುದರಿಂದ ಬೆಂಕಿ ಹತ್ತಿಕೊಳ್ಳುತ್ತದೆ. ಬೆಂಕಿ ನಿಯಂತ್ರಿಸಲು 10 ಅಗ್ನಿಶಾಮಕ ದಳದ ವಾಹನಗಳನ್ನು ತರಿಸಲಾಗಿದೆ.


ಪಾಲಿಕೆ, ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ
ಸುಮಾರು 100 ಮಂದಿ ಬೆಂಕಿ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು