ಇತ್ತೀಚಿನ ಸುದ್ದಿ
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ದಳ ಯಶಸ್ವಿ ಕಾರ್ಯಾಚರಣೆ
16/02/2023, 13:07
ಮಂಗಳೂರು(reporterkarnataka.com): ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ಸಮೀಪದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ಅಗ್ನಿ ಅನಾಹುತದಿಂದ ಕೆಲವು
ಮರ ಗಿಡಗಳು ಬೆಂಕಿಗಾಹುತಿಯಾಗಿದೆ.
ತ್ಯಾಜ್ಯ ವಿಲೇವಾರಿ ಪ್ರದೇಶ ವ್ಯಾಪ್ತಿಯ ಗುಡ್ಡದಲ್ಲಿ ಪೊದೆ, ಮರಗಿಡಗಳು ಬೆಂಕಿಗೆ ಆಹುತಿಯಾಗಿದೆ.
ಬುಧವಾರ ಮಧ್ಯಾಹ್ನದ ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕದ್ರಿ ಅಗ್ನಿಶಾಮಕ ಠಾಣೆಯ ಸಿಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.














