2:48 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪಚ್ಚನಾಡಿಯಲ್ಲಿ ಭಾರಿ ಭೂ ಮಾಫಿಯಾ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ ಆರೋಪ

01/06/2022, 11:54

ಮಂಗಳೂರು(reporterkarnataka.com): ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ ಆರೋಪ ಕೇಳಿ ಬಂದಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ ಕಾರ್ಪೊರೇಟರ್ ಒಬ್ಬರ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ ಎಂದು ಆರೋಪಿಸಲಾಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ.75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹಾಗೂ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪೌರ ಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಡಲಾಗಿದೆ ಎಂದು ಆರೋಪಿಸಿದ್ದಾರೆ.

ಅಕ್ರಮ ನಿರ್ಮಾಣದ ಸ್ಥಳಕ್ಕೆ ಭೇಟಿ ಕೊಟ್ಟು ಅಕ್ರಮ ನಿರ್ಮಾಣಗಾರರ ಜೊತೆ ಅಕ್ರಮ ನಿರ್ಮಾಣ ದಂಧೆಯಲ್ಲಿ ತೊಡಗಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.ಅಕ್ರಮ ಮನೆ ನಿರ್ಮಾಣ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುವುದು ಅನಿವಾರ್ಯವಾದಿತು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಸ್ವಚ್ಛ ಭಾರತ ಕ್ಕಾಗಿ ದುಡಿಯುವ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಜಾಗವನ್ನು ಕಬಲಿಸುವ ಭೂ ಮಾಫಿಯದ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಿ ಕಾನೂನು ಮೂಲಕ ದಂಡಿಸಿ ಮುಂದೆ ಯಾರು ಕಾನೂನನ್ನು ಕೈಗೆತ್ತಿಕೊಂಡು ಅಕ್ರಮ ಮಾಡದಂತೆ ನಿರ್ಮಾಣ ವಾಗಿರುವ ಕಟ್ಟಡವನ್ನು ತೆರವುಗೊಳಿಸಿ ಪೌರ ಕಾರ್ಮಿಕರಿಗೆ ನ್ಯಾಯ ಓದಗಿಸಬೇಕೆಂದು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂಬ್ಳಿ, ಮೆಲ್ವಿನ್ (ಮಾಜಿ ಸದಸ್ಯರು ಜಿಲ್ಲಾ ಪಂಚಾಯತ್ ), ಸ್ಥಳೀಯರಾದ ಸುಧಾಕರ್ ಅಂಚನ್, ಸ್ಟಾನಿ ಆಳ್ವಾರೀಶ್, ಸಜಿತ್ ಶೆಟ್ಟಿ ಅಲ್ಲದೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜೊತೆಗಿದ್ದರು.

ಪೊಲೀಸ್ ಇಲಾಖೆ ಅಕ್ರಮ ಮನೆ ನಿರ್ಮಿಸಿದವರ ವಿರುದ್ದ ಎಫ್ ಐ ಆರ್ ದಾಖಲಿಸಿತ್ತು. ನ್ಯಾಯಾಲದಲ್ಲಿ ಕೇಸ್ ನಡೆಯುತ್ತಿರುವಂತೆ ಅಕ್ರಮ ಮನೆ ಕೆಲಸ ಮುಂದುವರಿದಾಗ ಸ್ಥಳೀಯರು ಮಂಗಳೂರು ನಗರ ಪಾಲಿಕೆಗೆ ಎರಡು ಬಾರಿ ದೂರು ಸಲ್ಲಿಸಿದ ಮೇರೆಗೆ ಪಾಲಿಕೆ ಅಧಿಕಾರಿಗಳು ಭೇಟಿ ಕೊಟ್ಟು ಮನೆ ನಿರ್ಮಾಣ ತಡೆ ಹಿಡಿಯುವಂತೆ ಎಚ್ಚರಿಕೆ ಕೊಟ್ಟರು. ಕ್ಯಾರೇ ಮಾಡದ ಭೂ ಮಾಫಿಯ ಅಕ್ರಮ ಕಾಮಗಾರಿ ಮುಂದುವರಿಸಿತು. ಅದರ ಪರಿಣಾಮವಾಗಿ ಎರಡು ಮನೆ ಪೂರ್ಣ ಗೊಳ್ಳುವ ಹಂತದಲ್ಲಿ ಇದೆ.

ಅದು ಅಲ್ಲದೆ ಪಚ್ಚನಾಡಿ ಕಾರ್ಮಿಕ ನಗರದಲ್ಲೂ ಅಕ್ರಮ ಮನೆ ನಿರ್ಮಿಸಲು ಜೆಸಿಬಿ ಮೂಲಕ ಜಾಗ ಸಮತಟ್ಟು ಮಾಡಿರುವುದನ್ನು ಈ ಹಿಂದೆ ಮಾಧ್ಯಮದ ಮೂಲಕ ಬಯಲಿಗೆ ಎಳೆದು ಕಾನೂನು ಕ್ರಮಕ್ಕೆ ಜಿಲ್ಲಾಡಳಿತವನ್ನು ಮನವಿಯ ಮೂಲಕ ಸ್ಥಳೀಯರು ಒತ್ತಾಯಿಸಿದ್ದಾರೆ. ಆದರೆ ಯಾವುದೇ ಕಾನೂನಿನ ಭಯವಿಲ್ಲದೆ ಮನೆ ನಿರ್ಮಾಣ ಕಾರ್ಯ ಮುಂದುವರಿದು ಸುಮಾರು 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.


ಕಾನೂನಿನ ಭಯವಿಲ್ಲದೆ ಸರಕಾರಿ ಜಾಗ ಹಾಗೂ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣವನ್ನು  ಸ್ಥಳೀಯರು ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು