5:43 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪಶ್ಚಿಮವಾಹಿನಿ ಯೋಜನೆ: ಕೃಷಿ ಹಾಗೂ ಕುಡಿಯುವ ನೀರಿಗೆ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣ

03/07/2021, 22:10

ಮಂಗಳೂರು(reporterkarnataka news): ಪಶ್ಚಿಮವಾಹಿನಿ ಯೋಜನೆಯಡಿ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆ ಯೋಜನೆಯಿಂದ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ. ಸಿ. ಮಧುಸ್ವಾಮಿ  ಹೇಳಿದರು.

ಅವರು ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ  ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕೈಗೊಳ್ಳಲಾದ ವಿವಿಧ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ನುಡಿದರು.

ಇಲಾಖೆಯಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರೆಯಲಾದ ಟೆಂಡರುಗಳನ್ನು ಬೇಗ ಅನುಮತಿ ನೀಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಮಾಸ್ಟರ್ ಪ್ಲಾನ್ ಅನ್ನು ಸಂಬಂಧಿಸಿದ ಶಾಸಕರ ಗಮನಕ್ಕೆ ತರಲಾಗುವುದು. ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಇಲಾಖೆಯ ಕಾರ್ಯದರ್ಶಿಗಳಾದ ಮೃತ್ಯುಂಜಯ ಸ್ವಾಮಿ, ಇಲಾಖೆಯ ಮೈಸೂರು ವೃತ್ತದ ಎಸ್ ಸಿ ರಾಜಶೇಖರ ಯಡಳ್ಳಿ, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಗೋಕುಲದಾಸ್,  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ವಿಷ್ಣು ಕಾಮತ್, ಸಿಬ್ಬಂದಿಗಳಾದ ಶಿವ ಪ್ರಸನ್ನ, ರಾಕೇಶ್, ಆನಂದ್, ಲವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು