12:50 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್  ಹಕ್ಕುಪತ್ರ ವಿತರಣೆ

03/06/2022, 22:21

ಮಂಗಳೂರು(reporterkarnataka.com);.ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್  ಹಕ್ಕುಪತ್ರ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ ಕೆಲವೊಂದು ಹಕ್ಕುಪತ್ರ ನೀಡಲು ಬಾಕಿಯಿದ್ದು ತ್ವರಿತವಾಗಿ ಅವುಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು‌. 

ಸ್ವಂತ ಸೂರು ಕಟ್ಟಿಕೊಳ್ಳುವುದು ಪ್ರತಿಯೊಬ್ಬರ ಕನಸು. ಕಳೆದ ಕೆಲವು ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಅಲೆದಾಡಿದ ಬಡ ಕುಟುಂಬಗಳಿಗೆ ನಮ್ಮ ಅವಧಿಯಲ್ಲಿ ಹಕ್ಕುಪತ್ರ ನೀಡಲಾಗಿದೆ. ಅಭಿವೃದ್ಧಿಯ ಜೊತೆ ಜೊತೆಗೆ ಇಂತಹ ಕಾರ್ಯಗಳನ್ನೂ ಕೂಡ ಮಾಡಲಾಗಿದೆ ಎಂದು ಹೇಳಿದರು‌. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಉಪ ಆಯುಕ್ತರಾದ (ಅಡಳಿತ )ರವಿ ಕುಮಾರ್, ಸಮುದಾಯ ವ್ಯವಹಾರ ಅಧಿಕಾರಿ ಮಾಲಿನಿ ರೋಡ್ರಿಗಸ್, ನಗರ ಅಭಿಯಾನ  ವ್ಯವಸ್ಥಾಪಕರು ಎನ್. ಚಿತ್ತರಂಜನ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು