ಇತ್ತೀಚಿನ ಸುದ್ದಿ
ಪಡೀಲ್: ಡ್ರಗ್ಸ್ ಸಹಿತ 1.92 ಲಕ್ಷ ಮೌಲ್ಯದ ಸೊತ್ತು ವಶ; ಇಬ್ಬರು ಆರೋಪಿಗಳ ಬಂಧನ
03/01/2024, 11:21
ಮಂಗಳೂರು(reporterkarnataka.com): ನಗರದ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಆರೋಪ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಜಾಲ್ ನ ಯಾನೆ ಜುಟ್ಟು ಅಶ್ಪಾಕ(27) ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಎಂದು ತಿಳಿದು ಬಂದಿದೆ.
ಆರೋಪಿಗಳು ಕಪ್ಪು ಬಣ್ಣದ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ಪೋಲಿಸ್ ನಿರೀಕ್ಷಕರು, ಪಿಎಸ್ಐ ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದರು. ಬಂಧಿತರಿಂದ
19 ಗ್ರಾಂ MDMA ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 1,92,800 ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಪೈಕಿ ಜುಟ್ಟು ಅಶ್ಪಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಉಮ್ಮರ್ ಫಾರೂಕ್ ಇರ್ಫಾನ್ ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿತನ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.