ಇತ್ತೀಚಿನ ಸುದ್ದಿ
ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನ
24/09/2025, 19:23

ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಡಾ.
ಎಸ್.ಎಲ್.ಭೈರಪ್ಪ ಇಂದು ನಿಧನರಾದರು.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಅವರು ಕೊನೆಯುಸಿರೆಳೆದಿದ್ದಾರೆ. ಡಾ. ಎಸ್.ಎಲ್.ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಅವರಿಗೆ ಸಲ್ಲುತ್ತದೆ.
94 ವರ್ಷದ ಹಿರಿಯ ಸಾಹಿತಿ ಎಸ್. ಎಲ್. ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.