12:02 PM Thursday26 - December 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ… ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವವರು ಇದ್ದಾರಾ?: ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ… ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ

ಇತ್ತೀಚಿನ ಸುದ್ದಿ

ಪಡುಬಿದ್ರಿ: ಜೂನ್ 23ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

21/06/2024, 19:04

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕದ ಜಂಟಿ ಸಹಯೋಗದೊಂದಿಗೆ ಜೂನ್ 23ರಂದು ಪೂರ್ವಾಹ್ನ 9.33ರಿಂದ ಅಪರಾಹ್ನ 12.30ರವರೆಗೆ ಪಡುಬಿದ್ರಿಯ
ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ)ಯಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ ,ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿಪಿ ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗಿಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು