1:50 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ: ಸುದೇಶ್ ಮರೋಳಿ

22/08/2024, 14:27

ಮಂಗಳೂರು(reporterkarnataka.com): ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿಂದ ಹೋಗಿದ್ದ ಟೋಲ್ ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಕೋಶಾಧಿಕಾರಿ ಪ್ರಸಾದ್ ಹೆಗ್ಡೆ, ಸದಸ್ಯ ಜಯರಾಮ ಶೆಟ್ಟಿ, ಉಪಾಧ್ಯಕ್ಷ ಜೀವಂಧರ್ ಅಧಿಕಾರಿ, ದುರ್ಗಾ ಪ್ರಸಾದ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು