9:22 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪೆಗಾಸಸ್‌ ಬೇಹುಗಾರಿಕೆ ವಿವಾದ: ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಿದ ಸುಪ್ರಿಂ ಕೋರ್ಟ್‌

21/05/2022, 10:05

ಹೊಸದಿಲ್ಲಿ(reporterkarnataka.com): ವಿವಿಐಪಿಗಳ ಬೇಹುಗಾರಿಕೆ ಸಂಬಂಧಿಸಿದ ಪೆಗಾಸಸ್‌ ವಿವಾದದ ಕುರಿತು ತನಿಖೆ ನಡೆಸಲು ನ್ಯಾಯಾಲಯದಿಂದ ನೇಮಕಗೊಂಡ ಸಮಿತಿಗೆ ಸುಪ್ರಿಂ ಕೋರ್ಟ್‌ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ. 

ರಾಜಕೀಯ ನಾಯಕರು ಸೇರಿದಂತೆ ವಿವಿಧ ಪ್ರಮುಖ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲು ಪೆಗಾಗಸಸ್‌ ಸಾಫ್ಟ್‌ ವೇರ್‌ ಬಳಕೆಯಾಗಿರುವ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ರವೀಂದ್ರನ್‌ ಅವರ ನೇತೃತ್ವದಲ್ಲಿ 2021 ಅಕ್ಟೋಬರ್‌ ನಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆಗೆ ಅದೇಶ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ʼಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಾಧನಗಳನ್ನು ಪರೀಕ್ಷಿಸಲು ಸಮಿತಿಯು ತನ್ನದೇ ಆದ ಸಾಫ್ಟ್‌ ವೇರ್‌ ಅಭಿವೃದ್ಧಿ ಪಡಿಸಿದೆ, ಈ ಸಂಬಂಧ ವಿವಿಧ ಸರ್ಕಾರಿ ಏಜನ್ಸಿಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ಧಾರೆ. ಇನ್ನು ಈ ಕುರಿತು ತಾಂತ್ರಿಕ ಸಮಿತಿಯು ಪೆಗಾಸಸ್‌ ಸಾಧನಗಳ ಪರಿಶೀಲನೆಗೆ ಸ್ಟಾಂಡರ್ಡ್‌ ಆಪರೇಟಿಂಗ್‌ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತಿದ್ದು ಮೇ ಅಂತ್ಯದ ವೇಳೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು