3:12 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಪಜೀರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಿಶೇಷ ಶಿಬಿರ

15/03/2022, 23:48

ಬಂಟ್ವಾಳ(reporterkarnataka.com):
ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಕಾಲೇಜ್ ಆದ  ಸಂತ ಅಲೋಶಿಯಸ್  ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ‘ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವ ಜನತೆ’ ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ ಪಜೀರು ಗ್ರಾಮದ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಜರುಗಿತು.

ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಾಸ ಕಾರ್ಯಗಾರದಲ್ಲಿ ಬಂಟ್ವಾಳ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ  ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮಿ.ಜಿ ಕುಂಪಲ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಯೋಜಿತ ಗುರಿ ಇದ್ದರೆ ಯಶಸ್ಸು ಖಂಡಿತ. ಪ್ರತಿಯೊಬ್ಬ  ವ್ಯಕ್ತಿಯು ವಿಶೇಷ. ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಶುದ್ಧ ಮನಸ್ಸು, ಸದ್ವಿಚಾರ, ತಮ್ಮ ಸ್ವಶಕ್ತಿ ಸಾಮರ್ಥ್ಯವನ್ನು ಅರಿತುಕೊಳ್ಳುವುದು, ಉತ್ತಮ ಶಿಕ್ಷಣವನ್ನೂ ಪಡೆಯುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ.ಹಾಗೂ ಪುಸ್ತಕ ವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.


ಯೋಜನಾಧಿಕಾರಿಗಳಾದ ಅಲ್ವಿನ್ ಡಿ.ಸೋಜ,ಪ್ರೀಮ ವಿಕ್ಟೋರಿಯಾನ್ ತಾವ್ರ್ರೋ,ಕ್ಯಾರಲ್ ಶರಲ್ ಪಿರೇರಾ,ಡಾ.ನಂದಿನಿ ಶೇಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು