ಇತ್ತೀಚಿನ ಸುದ್ದಿ
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಕಾಲಿಗೆ ಗಾಯ; ಇತರ 6 ಮಂದಿ ಆಸ್ಪತ್ರೆಗೆ
03/11/2022, 19:09
ಇಸ್ಲಾಮಾಬಾದ್(reporter Karnataka.com): ವಾಜಿರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು,ಇಮ್ರಾನ್ ಖಾನ್ ಅವರ ಕಾಲಿಗೆ ಗುಂಡು ತಗುಲಿದೆ.
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು
ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಅಧಿಕಾರಿ ಅಜರ್ ಮಶ್ವಾನಿ ಅವರು ಗುರುವಾರ ತಿಳಿಸಿದ್ದಾರೆ.
ದಾಳಿಯಲ್ಲಿ ಮತ್ತೊಬ್ಬ ರಾಜಕಾರಣಿ ಫೈಸಲ್ ಜಾವೇದ್ ಖಾನ್ ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ