7:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು