ಇತ್ತೀಚಿನ ಸುದ್ದಿ
ಪಕ್ಷಿಕೆರೆ: ಆತ್ಮಶಕ್ತಿ ಸಹಕಾರಿ ಸಂಘದಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
11/05/2026, 21:10
ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಕ್ಷಿಕೆರೆ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಅತ್ತಾವರ ಕೆಎಂಸಿ ಆಸ್ಪತ್ರೆ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ನ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಪಕ್ಷಿಕೆರೆಯ
ಅಂಬೇಡ್ಕರ್ ಭವನದಲ್ಲಿ ಜರುಗಿತು.
ಶಿಬಿರವನ್ನು ವಿನಾಯಕ ಮಿತ್ರ ಮಂಡಳಿಯ ಗೌರವಾಧ್ಯಕ್ಷರಾದ ಶ್ರೀ ಧನಂಜಯ ಶೆಟ್ಟಿಗಾರ್ ರವರು ಉದ್ಘಾಟಿಸಿ ಮಾತನಾಡಿ “ನಾವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬೇಕು. ನಾವು ಎರಡು ಸ್ಥಿತಿಯಲ್ಲಿ ಆರೋಗ್ಯವಾಗಿ ಇದ್ದರೆ ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ. ಇವೆಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ಸಂಘ-ಸಂಸ್ಥೆಗಳ ಜೊತೆ ಸೇರಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಈ ಶಿಬಿರದ ಪ್ರಯೋಜನ ಊರಿಗೆ ಸಿಗಲಿ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನಷ್ಟು ಬೆಳವಣಿಗೆಯನ್ನು ಕಾಣಲಿ” ಎಂದು ಶುಭ ಹಾರೈಸಿದರು.
ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು ಇಲ್ಲಿನ ಸಮುದಾಯ ದಂತ ಆರೋಗ್ಯ ಶಿಬಿರದ ಮುಖ್ಯಸ್ಥೆಯಾದ ಡಾ| ರಮ್ಯ ಶೆಣೈ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಇಂತಹ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ಕೆಎಂಸಿ ಆಸ್ಪತ್ರೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿ, ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಸೇವೆಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.


ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 14 ವರ್ಷಗಳಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ನಡೆಸಿಕೊಂಡು ಬರುತ್ತಿದೆ. ಇದು ಸಂಘದ 108ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಮನುಷ್ಯನಿಗೆ ಆರೋಗ್ಯ ಎಂಬುವುದು ಬಹಳ ಮುಖ್ಯವಾಗಿದೆ. ನಮ್ಮಲ್ಲಿ ಎಷ್ಟೇ ಹಣವಿದ್ದರೂ ಆರೋಗ್ಯ ಚೆನ್ನಾಗಿರದಿದ್ದರೆ ಪ್ರಯೋಜನವಿಲ್ಲ. ಹಾಗಾಗಿ ನಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಮೊದಲಿಗೆ ತಿಳಿದುಕೊಂಡರೆ, ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳಬಹುದು. ಜನರ ಈ ಬಿಡುವಿಲ್ಲದ ದಿನಚರಿಯಲ್ಲಿ ಆರೋಗ್ಯದ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರಜಾ ದಿನದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಪಕ್ಷಿಕೆರೆ ಪರಿಸರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಲಿ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ ಈ ಶಿಬಿರಕ್ಕೆ ಸಹಕರಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಗ್ರಾಮೀಣ ಭಾಗದ ಜನರಿಗೆ ಪ್ರಯೋಜನವಾಗಲಿ ಎಂಬ ಉದ್ದೇಶದಿಂದ ಪಕ್ಷಿಕೆರೆಯಲ್ಲಿ ಶಾಖೆಯನ್ನು ತೆರೆದಿದ್ದೇವೆ ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ ಸನಿಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರು ಇದರ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್, ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷರಾದ ಶ್ರೀ ಧನರಾಜ್ ಅಂಚನ್ ಹಾಗೂ ವಿನಾಯಕ ಮಹಿಳಾ ಮಂಡಳಿ (ರಿ.) ಪಕ್ಷಿಕೆರೆ ಇದರ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮೀ
ಶೆಟ್ಟಿಗಾರ್, ಶ್ರೀ ಹರಿಪಾದ ಜಾರಂದಾಯ ಯುವಕ ಮಂಡಲದ ಉಪಾಧ್ಯಕ್ಷರಾದ ಶ್ರೀ ಯಾದವ ಸಾಲ್ಯಾನ್, ಕರ‍್ದಬ್ಬು ದೈವಸ್ಥಾನದ ಗುರಿಕಾರರಾದ ಶ್ರೀ ಸತೀಶ್ ಸಿ ಅಮೀನ್, ಕರ‍್ದಬ್ಬು ದೈವಸ್ಥಾನ ಸೇವಾ ಸಮಿತಿ (ರಿ.) ಪಕ್ಷಿಕೆರೆ ಇದರ ಅಧ್ಯಕ್ಷರಾದ ಶ್ರೀ ರಮಾನಾಥ್ , ಪಕ್ಷಿಕೆರೆ ಶಾಖೆಯ ಕಟ್ಟಡ ಮಾಲಿಕರಾದ ಶ್ರೀ ಶೀನ ಕೋಟ್ಯಾನ್ , ಕೆಎಂಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಹರ್ಬಟ್ ಮರಿಯೊ, ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇದರ ಸಿಬ್ಬಂದಿಯಾದ ಶ್ರೀಮತಿ ಲಿಲ್ಲಿ ಮೇರಿ, ಮತ್ತಿತರರು ಉಪಸ್ಥಿತರಿದ್ದರು.
ಶಿಬಿರವನ್ನು ಎನ್.ಜಿ ವರ್ಲ್್ಡ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್ ಕೋಡಿ ತೋಕೂರು, ವಿನಾಯಕ ಮಿತ್ರ ಮಂಡಳಿ (ರಿ.) ಹಾಗೂ ವಿನಾಯಕ ಮಹಿಳಾ ಮಂಡಳಿ (ರಿ.) ಪಕ್ಷಿಕೆರೆ, ಶ್ರೀ ಹರಿಪಾದ ಜಾರಂದಾಯ ಯುವಕ ಮಂಡಲ (ರಿ.) ಹಾಗೂ ಮಹಿಳಾ ಮಂಡಳಿ (ರಿ.) ಪಂಜ ಕೊಂಕುಡೆ , ಕರ‍್ದಬ್ಬು ದೈವಸ್ಥಾನ ಸೇವಾ ಸಮಿತಿ (ರಿ.) ಪಕ್ಷಿಕೆರೆ ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು. ಈ ಶಿಬಿರದ ಪ್ರಯೋಜನವನ್ನು ಸುಮಾರು 150ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಶಾಖಾಧಿಕಾರಿ ಶ್ರೀಮತಿ ಸುಜಾತ ರವರು ಸ್ವಾಗತಿಸಿದರು. ಬಜ್ಪೆ ಶಾಖೆಯ ಶಾಖಾಧಿಕಾರಿ ಶ್ರೀಮತಿ ಹರ್ಷಿತಾ ವಂದಿಸಿದರು. ಸಂಘದ ಪಕ್ಷಿಕೆರೆ ಶಾಖೆಯ ಶಾಖಾಧಿಕಾರಿ ಶ್ರೀಮತಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.











