3:32 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ

08/09/2025, 17:27

ಮಂಗಳೂರು(reporterkarnataka.com):ಕರಾವಳಿಯಲ್ಲಿ ಕಥೋಲಿಕ್ ಸಮುದಾಯದವರು ಸೋಮವಾರ ಮೊಂತಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು. ಚರ್ಚ್ ಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಬಲಿಪೂಜೆಯಲ್ಲಿ ಭಕ್ತರು ಭಾಗವಹಿಸಿದರು.
ಯೇಸು ಸ್ವಾಮಿಯ ತಾಯಿ ಮಾತೆ ಮೇರಿಯ ಹುಟ್ಟು ಹಬ್ಬವನ್ನು ಕಥೋಲಿಕ್ ಕ್ರೈಸ್ತರು ಆಶೀರ್ವಚನ ಮಾಡಿದ ಭತ್ತದ ತೆನೆಯ ಕಾಳುಗಳನ್ನು ಹಾಲಿನಲ್ಲಿ ಅಥವಾ ಪಾಯಸದಲ್ಲಿ ಬೆರೆಸಿ ಸೇವಿಸುವ ಜತೆಗೆ ಸಸ್ಯಾಹಾರದಲ್ಲಿ ಭೋಜನವನ್ನು ಕುಟುಂಬದ ಜತೆಯಲ್ಲಿ ಸವಿಯುವ ಈ ಹಬ್ಬವನ್ನು ಕರಾವಳಿ ಭಾಗದಲ್ಲಿ ಆಚರಣೆ ಮಾಡಲಾಗುತ್ತದೆ.
ಪುಟಾಣಿ ಮಕ್ಕಳು ತಟ್ಟೆö, ಹೂವಿನ ಬುಟ್ಟಿಯಲ್ಲಿ ಹೂವುಗಳನ್ನು ತಂದು ಮೇರಿ ಮಾತೆಗೆ ಅರ್ಪಣೆ ಮಾಡಿಕೊಂಡು ಸಿಹಿ ತಿಂಡಿಗಳ ಜತೆಗೆ ಕಬ್ಬುಗಳನ್ನು ಪಡೆದುಕೊಂಡು ಸಂಭ್ರಮಿಸಿದರು. ಚರ್ಚ್ ಗಳಲ್ಲಿ ಮೆರವಣಿಗೆಯ ಮೂಲಕ ಭತ್ತದ ತೆನೆಯನ್ನು ತಂದು ಚರ್ಚ್‌ ಒಳಗಿಟ್ಟು ಆಶೀರ್ವದಿಸುವ ಜತೆಯಲ್ಲಿ ಸಂಭ್ರಮದ ಬಲಿಪೂಜೆಯಲ್ಲಿ ಭಕ್ತರು ಭಾಗಹಿಸಿದರು. ಚರ್ಚ್ ಗಳಲ್ಲಿ ಹಬ್ಬದ ಸಂತೋಷ ಹಂಚಿಕೊಳ್ಳಲು ಎಲ್ಲ ಭಕ್ತಾದಿಗಳಿಗೆ ಕಬ್ಬು ವಿತರಣೆ ಮಾಡಲಾಯಿತು. ಕೆಲವು ಚರ್ಚ್ ಗಳಲ್ಲಿ ಹಬ್ಬದ ದಿನ ಸಂಜೆ ಧರ್ಮಕೇಂದ್ರ ಮಟ್ಟದಲ್ಲಿ ನಾನಾ ಸ್ಪರ್ಧೆ ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
*ವಿಶೇಷ ಬಲಿಪೂಜೆಗಳು:* ಕರಾವಳಿಯ ಎರಡು ಧರ್ಮಪ್ರಾಂತ್ಯಗಳಲ್ಲಿರುವ ಎಲ್ಲ ಚರ್ಚ್ ಗಳಲ್ಲಿ ಸೋಮವಾರ ವಿಶೇಷ ಬಲಿಪೂಜೆಗಳು ಸಾಗಿತು. ನಗರದ ಮಿಲಾಗ್ರಿಸ್, ರೊಸಾರಿಯೋ, ಉರ್ವ ಲೇಡಿಹಿಲ್, ಬೆಂದೂರ್ ವೆಲ್, ಅಶೋಕ ನಗರ, ಕೂಳೂರು, ಕುಲಶೇಖರ ಸೇರಿದಂತೆ ಪ್ರಮುಖ ಚರ್ಚ್ ಗಳಲ್ಲಿ ಹಬ್ಬದ ದಿನ ಬಲಿಪೂಜೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತರು ಪ್ರಾರ್ಥನಾವಿಧಿಗಳಲ್ಲಿ ಕಾಣಿಸಿಕೊಂಡರು. ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ ಅವರು ನಗರದ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಮೊಂತಿ ಹಬ್ಬದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿದರು.


ಕುಟುಂಬಗಳಲ್ಲಿ ಸಹ ಭೋಜನ: ಮೊಂತಿ ಹಬ್ಬದ ಅಂಗವಾಗಿ ಕ್ರೈಸ್ತ ಸಮುದಾಯದ ಕುಟುಂಬದವರು ಹೆಚ್ಚಾಗಿ ಸಸ್ಯಾಹಾರ ಭೋಜನವನ್ನು ತಮ್ಮ ಕುಟುಂಬದ ಮೂಲ ಮನೆಯ ಹಿರಿಯರ ಜತೆಯಲ್ಲಿ ಸೇರಿಕೊಂಡು ಮಾಡಿದರು. ಈ ಬಳಿಕ ಚರ್ಚ್ ಗಳಿಂದ ತಂದ ತೆನೆಯ ಕಾಳುಗಳನ್ನು ಹಾಲು, ಪಾಯಸದ ಜತೆಯಲ್ಲಿ ಸೇವಿಸಿಕೊಂಡು ಹಬ್ಬದ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ನಡೆಸಿದರು. ವಿದೇಶದಲ್ಲಿರುವ ತಮ್ಮ ಕುಟುಂಬ ಸದಸ್ಯರಿಗೆ ತೆನೆಯನ್ನು ಅಂಚೆ ಲಕೋಟೆಯಲ್ಲಿ ತುಂಬಿಸಿದ ಅವರಿಗೆ ರವಾನೆ ಮಾಡುವ ಮೂಲಕ ಅವರು ಕೂಡ ಹಬ್ಬವನ್ನು ಆಚರಣೆ ಮಾಡುವಂತಾಗಲಿ ಎಂದು ಹಿರಿಯರು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು