5:16 AM Sunday24 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಪಾಲಿಕೆ ಆಯುಕ್ತರ ವಜಾಗೊಳಿಸಲು ಒತ್ತಾಯಿಸಿ ಸಿಪಿಎಂ ಕಾರ್ಯಕರ್ತರಿಂದ ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರಿಂದ ತಡೆ; ಬಂಧನ

23/07/2024, 21:18

ಮಂಗಳೂರು(reporterlarnataka.com): ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು.


ಭ್ರಷ್ಟ, ಲೂಟಿಕೋರ ಆಯುಕ್ತರು ತೊಲಗಲೇಬೇಕೆಂದು ಸೇರಿದ್ದ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಬಳಿಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯರಾದ ಬಿ.ಕೆ. ಇಮ್ತಿಯಾಜ್, ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಸಹಿತ ಇತರೆ ಯೋಜನೆಯ ನೂರಾರೂ ಕೋಟಿ ಅನುದಾನವನ್ನು ನಗರದ ಅಭಿವೃದ್ಧಿಗೆ ಬಳಸುವ ಬದಲಾಗಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಈ ಹಿಂದೆಯೇ ಮಂಗಳೂರಿನಿಂದ ವರ್ಗಾವಣೆಗೊಂಡಿದ್ದ ಪಾಲಿಕೆ ಆಯುಕ್ತರು ಎಷ್ಟು ಕೋಟಿ ದುಡ್ಡು ಕೊಟ್ಟು ಆ ವರ್ಗಾವಣೆಯನ್ನು ರದ್ದುಗೊಳಿಸಿದ್ದಾರೆಂದು ನಗರದ ಜನರಿಗೆ ತಿಳಿಸಬೇಕು. ಈಗ ಲೋಕಾಯುಕ್ತ ಬಲೆಗೆ ಬಿದ್ದ ಆಯುಕ್ತರನ್ನು ಬಂಧಿಸದೆ ಇರಲು ಇಲ್ಲಿನ‌ ಪಾಲಿಕೆ ಆಡಳಿತ ಬಿಜೆಪಿ ಮತ್ತು ಶಾಸಕ ವೇದವ್ಯಾಸ ಕಾಮತರು ಪರೋಕ್ಷವಾಗಿ ಶಾಮೀಲಾಗಿದ್ದಾರೆ. ರಾಜ್ಯ ಸರಕಾರವೂ ಈ ಆಯುಕ್ತರ ಪರವಾದ ಧೋರಣೆಗಳನ್ನು ಹೊಂದಿದೆ. ಜನರ ತೆರಿಗೆ ಹಣವನ್ನು ಲೂಟಿಗೈಯ್ಯಲು ಬಂದಿರುವ ಇಂತಹ ಭ್ರಷ್ಟ ಪಾಲಿಕೆ ಆಯುಕ್ತರು ಮಂಗಳೂರಿಗೆ ಬೇಕಾಗಿಲ್ಲ. ಈ ಕೂಡಲೇ ವಜಾಗೊಳಿಸಿ ಎಂದು ಆಗ್ರಹಿಸಿದರು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ರವರು ಮಾತನಾಡಿ, ನಗರ ಪಾಲಿಕೆಯಲ್ಲಿ ಆಡಳಿತ ನಡೆಸುವ ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದ್ದು ಅದರ ಪ್ರತಿಫಲವೇ ಸ್ವತಃ ಆಯುಕ್ತರು ಅಕ್ರಮ ಆಸ್ತಿ ಸಂಪಾದನೆ ಮಾಡುವ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದ ಹಾಗೆ ಅಗಿದೆ. ಕೋಟ್ಯಂತರ ಬೆಲೆ ಬಾಳುವ ಮೂರು ಮನೆಗಳನ್ನು ಹೊಂದಿರುವ ಈ ಭ್ರಷ್ಟ ಆಯುಕ್ತರಿಗೆ ತನ್ನ ಅಧಿಕಾರದ ಅವಧಿಯಲ್ಲಿ ಬಡವರಿಗೆ ಒಂದು ತುಂಡು ನಿವೇಶನ ನೀಡಲು ಸಾಧ್ಯವಾಗಿಲ್ಲ. ವಾಲ್ಮೀಕಿ ಹಗರಣ, ಮೂಡ ಹಗರಣದ ಬಗ್ಗೆ ಉದ್ದುದ್ದ ಮಾತನಾಡುವ ಶಾಸಕ ವೇದವ್ಯಾಸರಿಗೆ ತನ್ನ ಕಾಲಬುಡದಲ್ಲಿರುವ ಮನಪಾ ಆಯುಕ್ತರ ಅಕ್ರಮ ಆಸ್ತಿಯ ಬಗ್ಗೆ ಮಾತನಾಡಲು ಎದೆಗಾರಿಕೆ ಇಲ್ಲವೇ ಎಂದು ಪ್ರಶ್ನಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಅವರು ಮಾತನಾಡಿ, ಸುಂದರ ಸಮೃದ್ದ, ಸ್ವಚ್ಛ ಮಂಗಳೂರು ನಿರ್ಮಾಣದಲ್ಲಿ ಕೈಜೋಡಿಸಬೇಕಾದ ಶಾಸಕ ಆಯುಕ್ತರ ಜೋಡಿ ಇಡೀ ಮಂಗಳೂರನ್ನು ಕಬಳಿಸಲು ಹೊಂಚು ಹಾಕುತ್ತಿದ್ದು,ಇದರ ವಿರುದ್ಧ ಮಂಗಳೂರಿನ ಪ್ರಜ್ಞಾವಂತ ಜನತೆ ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಜಯಂತಿ ಶೆಟ್ಟಿ, ಮಹಿಳಾ ಮುಖಂಡರಾದ ಪ್ರಮೀಳಾ ದೇವಾಡಿಗ, ಅಸುಂತ ಡಿಸೋಜ,ಯೋಗಿತಾ ಉಳ್ಳಾಲ, ಯುವಜನ ನಾಯಕರಾದ ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ಸಾಮಾಜಿಕ ಚಿಂತಕರಾದ ಜೆ ಇಬ್ರಾಹಿಂ ಜೆಪ್ಪು ಅವರು ಭಾಗವಹಿಸಿದ್ದರು.
ಮುತ್ತಿಗೆ ಚಳುವಳಿಯ ನೇತೃತ್ವವನ್ನು ಸಿಪಿಎಂ ಮಂಗಳೂರು ನಗರ ಮುಖಂಡರಾದ ಪ್ರಮೀಳಾ ಶಕ್ತಿನಗರ, ದಯಾನಂದ ಶೆಟ್ಟಿ, ಅಶೋಕ್ ಶ್ರೀಯಾನ್, ಭಾರತಿ ಬೋಳಾರ, ನಾಗೇಶ್ ಕೋಟ್ಯಾನ್, ದೀಪಕ್ ಬಜಾಲ್, ನವೀನ್ ಕೊಂಚಾಡಿ, ತಯ್ಯೂಬ್ ಬೆಂಗರೆ, ಕೃಷ್ಣ ತಣ್ಣೀರುಬಾವಿ, ರೆಹಮಾನ್, ರಿಯಾಜ್, ಶಶಿಧರ್ ಶಕ್ತಿನಗರ, ಉಮೇಶ್ ಮುಂತಾದವರು ವಹಿಸಿದ್ದರು.
ಪಾಲಿಕೆ ಕಚೇರಿಗೆ ನುಗ್ಗಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಿಪಿಎಂ ಹೋರಾಟಗಾರರನ್ನು ಪೊಲೀಸರು ಬಲಪ್ರಯೋಗದಿಂದ ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ನಂತರ ರಸ್ತೆ ತಡೆ ಮಾಡಿದ್ದು,ಕೂಡಲೇ ಕಾರ್ಯಪ್ರವೃತ್ತರಾದ ಪೋಲಿಸರು ಅವರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು