6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ

05/10/2023, 21:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):
ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು.


ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ್ನು ಮಾಜಿ ಶಾಸಕ ಜೆ.ಆರ್. ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಚುನಾವಣೆಯ ಸಂದರ್ಭ 44ಕ್ಕೂ ಹೆಚ್ಚು ಸದಸ್ಯರನ್ನು ಆರಿಸಿ ಕಳಿಸುತ್ತೇವೆ.


ಪ್ರವೀಣ್ ಚಂದ್ರ ಆಳ್ವ ಅವರು ವಿಪಕ್ಷ ನಾಯಕನಾಗಿ ಬಿಜೆಪಿಯ ದುರಾಡಳಿತದ ವಿರುದ್ಧ ಎಚ್ಚರಿಸುವ ಹಾಗೂ ಜನಪರ ಸಮರ್ಥ ಹೋರಾಟವನ್ನು ನಡೆಸುವ ಭರವಸೆ ಇದೆ ಎಂದು ನುಡಿದರು.
ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು.
ಬಿಜೆಪಿಯ ತಪ್ಪುಗಳನ್ನ ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಹಾರಿಸಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.








ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು. ಕಾಂಗ್ರೆಸ್ ನಾಯಕ ಮಿಥುನ್ ರೈ,
ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್, ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್,
ಟಿ.ಕೆ ಸುಧೀರ್, ಪದ್ಮರಾಜ್ ಆರ್., ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್, ಶಾಲೆಟ್ ಪಿಂಟೋ, ಮಮತಾ ಗಟ್ಟಿ,ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ,ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು